ಧಾರವಾಡ: ಇತ್ತೀಚೆಗೆ ಹುಬ್ಬಳ್ಳಿ, ಧಾರವಾಡ ಬೈಪಾಸ್ ರಸ್ತೆಯಲ್ಲಿ ಕಾರಿಗೆ ಡಿಕ್ಕಿ ಹೊಡೆದುಕೊಂಡು ಹೋಗಿದ್ದ ಲಾರಿಯನ್ನು ಪತ್ತೆ ಮಾಡುವಲ್ಲಿ ಧಾರವಾಡ ಸಂಚಾರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಬೈಪಾಸ್ ರಸ್ತೆಯಲ್ಲಿ ಇತ್ತೀಚೆಗೆ ಕಾರಿಗೆ ಲಾರಿ ಡಿಕ್ಕಿ ಹೊಡೆದುಕೊಂಡು ಪರಾರಿಯಾಗಿತ್ತು. ಈ ಘಟನೆಯಲ್ಲಿ ಕಾರಿನಲ್ಲಿದ್ದ ಕೆಲವರಿಗೆ ಗಾಯಗಳೂ ಆಗಿದ್ದವು. ಈ ಘಟನೆ ನಡೆದ ಬಳಿಕ ಲಾರಿ ಚಾಲಕ ತನ್ನ ಲಾರಿ ನಿಲ್ಲಿಸದೇ ಪರಾರಿಯಾಗಿದ್ದ.
ಇದಾದ ಕೆಲ ದಿನಗಳಲ್ಲೇ ಪರಾರಿಯಾಗಿದ್ದ ಲಾರಿಯನ್ನು ಪತ್ತೆ ಮಾಡುವಲ್ಲಿ ಧಾರವಾಡ ಸಂಚಾರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
Kshetra Samachara
01/04/2026 03:56 pm
LOADING...