ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಂಜನಗೂಡು: ಅಪರಿಚಿತ ವಾಹನ ಡಿಕ್ಕಿ - ರಸ್ತೆ ದಾಟುತ್ತಿದ್ದ ಜಿಂಕೆಗೆ ಸ್ಥಳದಲ್ಲೇ ಸಾವು

ನಂಜನಗೂಡು: ರಸ್ತೆ ದಾಟುತ್ತಿದ್ದ ಜಿಂಕೆಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಜಿಂಕೆ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ನೇರಳೆ ಗೇಟ್ ಬಳಿ ನಡೆದಿದೆ.

ನಂಜನಗೂಡು ಮತ್ತು ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ನೇರಳೆ ಗೇಟ್ ಬಳಿ ಜಿಂಕೆಯೊಂದು ರಸ್ತೆ ದಾಟುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಜಿಂಕೆಯು ಸ್ಥಳದಲ್ಲಿಯೇ ಮೃತಪಟ್ಟಿದೆ. ಅಪರಿಚಿತ ವಾಹನದ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ನೇರಳೆ ಗೇಟ್ ಬಳಿ ಜಿಂಕೆಗಳು ಹೆಚ್ಚಾಗಿ ರಸ್ತೆ ಅಪಘಾತದಿಂದ ಸಾವನ್ನಪ್ಪಿರುವ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದ್ದು, ಈ ಸ್ಥಳದಲ್ಲಿ ನಾಮಫಲಕ ಮತ್ತು ಸ್ಪೀಡ್ ಬ್ರೇಕರ್ ಅಳವಡಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಸ್ತೆ ದಾಟುವ ವೇಳೆ ಈ ಘಟನೆ ನಡೆದಿದ್ದು, ಆ ಸ್ಥಳದಲ್ಲಿ ನಾಮಫಲಕ ಅಳವಡಿಸುವಂತೆ ವರದಿ ಸಲ್ಲಿಸುತ್ತೇನೆ ಎಂದು ವಲಯ ಅರಣ್ಯ ಅಧಿಕಾರಿ ನಿತಿನ್ ಕುಮಾರ್ ತಿಳಿಸಿದ್ದಾರೆ.

Edited By : Vijay Kumar
PublicNext

PublicNext

01/04/2026 04:00 pm

Cinque Terre

4.57 K

Cinque Terre

0

ಸಂಬಂಧಿತ ಸುದ್ದಿ