ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ಮಳೆಬಾಧಿತ ಬಡಾವಣೆಗಳಿಗೆ ಶಾಸಕ ಎಸ್.ಎನ್ ಚನ್ನಬಸಪ್ಪ ಭೇಟಿ

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ತೊಂದರೆಗೊಳಗಾದ ಶ್ರೀ ರಾಮನಗರ, ಕೆಂಚಪ್ಪ ಬಡಾವಣೆ ಹಾಗೂ ಶರಾವತಿ ನಗರದ ವಿವಿಧ ಭಾಗಗಳಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಬಡಾವಣೆಗಳಲ್ಲಿ ಮಳೆನೀರು ಸರಾಗವಾಗಿ ಹರಿಯದೆ ಸಾರ್ವಜನಿಕರ ಆಸ್ತಿಪಾಸ್ತಿಗಳಿಗೆ ಹಾನಿಯಾಗಿರುವುದನ್ನು ಗಮನಿಸಿದ ಶಾಸಕರು, ತಕ್ಷಣವೇ ಕಾರ್ಯಪ್ರವೃತ್ತರಾಗುವಂತೆ ಮಹಾನಗರ ಪಾಲಿಕೆ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಮುಂಬರುವ ಮಳೆಗಾಲದ ವೇಳೆಗೆ ಯಾವುದೇ ಬಡಾವಣೆಯಲ್ಲಿ ನೀರು ನಿಲ್ಲದಂತೆ ರಾಜಕಾಲುವೆ ಹಾಗೂ ಚರಂಡಿಗಳ ದುರಸ್ತಿಯನ್ನು ಕಾರ್ಯವನ್ನು ಕೈಗೊಳ್ಳಬೇಕು. ಮಳೆಗಾಲಕ್ಕೂ ಮುನ್ನವೇ ನಗರದ ಪ್ರಮುಖ ಚರಂಡಿಗಳಲ್ಲಿ ಹೂಳೆತ್ತುವ ಪ್ರಕ್ರಿಯೆ ಪೂರ್ಣಗೊಳ್ಳಬೇಕು. ಮಳೆಯಿಂದಾಗಿ ಸಾರ್ವಜನಿಕರಿಗೆ ತೊಂದರೆಯಾದಲ್ಲಿ ತಕ್ಷಣದ ಪರಿಹಾರ ಕಾರ್ಯಗಳಿಗೆ ವಿಶೇಷ ತಂಡಗಳನ್ನು ರಚಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು‌.

Edited By : Shivu K
PublicNext

PublicNext

01/04/2026 04:28 pm

Cinque Terre

9.53 K

Cinque Terre

0

ಸಂಬಂಧಿತ ಸುದ್ದಿ