ಚಳ್ಳಕೆರೆ: ನಡೆದಾಡುವ ದೇವರೆಂದೇ ಖ್ಯಾತರಾಗಿರುವ ಶಿವಕುಮಾರ ಸ್ವಾಮೀಜಿಯವರ ಜನ್ಮದಿನದಂದು ಚಳ್ಳಕೆರೆ ನಗರದ ವಾಲ್ಮೀಕಿ ವೃತ್ತದ ಬಳಿ ಅನ್ನ ದಾಸೋಹ ಕಾರ್ಯಕ್ರಮ ನಡೆಯಿತು. ಶಿವಕುಮಾರ ಸ್ವಾಮೀಜಿಯವರು ತ್ರಿವಿಧ ದಾಸೋಹಿಯಾಗಿದ್ದು, ಅನ್ನ, ಅಕ್ಷರ ಮತ್ತು ಜ್ಞಾನ ದಾಸೋಹದ ಮೂಲಕ ಲಕ್ಷಾಂತರ ಮಕ್ಕಳಿಗೆ ಸೇವೆ ಸಲ್ಲಿಸಿದ್ದಾರೆ.
ಸಿದ್ಧಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿಯವರ 119ನೇ ಜನ್ಮದಿನಾಚರಣೆಯು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಸಾನಿಧ್ಯದಲ್ಲಿ ನಡೆಯುತ್ತಿದೆ. ಈ ಸಂದರ್ಭದಲ್ಲಿ ಅನ್ನ ದಾಸೋಹ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಶಿವಕುಮಾರ ಸ್ವಾಮೀಜಿಯವರು ನಡೆದಾಡುವ ದೇವರಾಗಿದ್ದರು, ಅವರ ಸೇವೆಯನ್ನು ಸ್ಮರಿಸಲು ಮತ್ತು ಅವರ ತತ್ವಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಲು ಈ ದಿನವನ್ನು ಆಚರಿಸಲಾಗುತ್ತದೆ ಎಂದು ನಗರಸಭೆ ಮಾಜಿ ಸದಸ್ಯ ವಿಶುಕುಮಾರ್ ತಿಳಿಸಿದರು.
Kshetra Samachara
01/04/2026 04:49 pm
LOADING...