ಶಿವಮೊಗ್ಗ : ನಗರದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದಲ್ಲಿ ಬುಧವಾರ ಜರುಗಿದ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಸ್ಥಾನದ ವಾರ್ಷಿಕೋತ್ಸವ ಹಾಗೂ 27ನೇ ವರ್ಷದ ಸರಳ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎನ್. ಚನ್ನಬಸಪ್ಪ ಅವರು ಪಾಲ್ಗೊಂಡು ನವದಂಪತಿಗಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮವು ಪೂಜ್ಯಶ್ರೀ ಪ್ರಸನ್ನನಾಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಭಕ್ತಿಪೂರ್ವಕವಾಗಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು,’ಆದಿಚುಂಚನಗಿರಿ ಮಠವು ಕೇವಲ ಧಾರ್ಮಿಕ ಕೇಂದ್ರವಲ್ಲ, ಅದೊಂದು ಸಾಮಾಜಿಕ ಬದಲಾವಣೆಯ ವೇದಿಕೆ. ಕಳೆದ 27 ವರ್ಷಗಳಿಂದ ನಿರಂತರವಾಗಿ ಸಾಮೂಹಿಕ ವಿವಾಹಗಳನ್ನು ಆಯೋಜಿಸುವ ಮೂಲಕ ಮಠವು ಸಮಾಜದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಆಸರೆಯಾಗಿದೆ ಎಂದು ಶ್ಲಾಘಿಸಿದರು.
ಇದೇ ಸಮಾರಂಭದಲ್ಲಿ ಸಮಾಜಕ್ಕೆ ಮಾದರಿಯಾಗಿ ಬದುಕುತ್ತಿರುವ ಹಿರಿಯ ದಂಪತಿಗಳನ್ನು ಗುರುತಿಸಿ ’ಆದರ್ಶ ದಂಪತಿ’ ಗೌರವ ನೀಡಿ ಸನ್ಮಾನಿಸಲಾಯಿತು. ಹಿರಿಯರ ಅನುಭವ ಮತ್ತು ಮಾರ್ಗದರ್ಶನ ಮುಂದಿನ ಪೀಳಿಗೆಗೆ ಅತ್ಯಂತ ಅವಶ್ಯಕವಾಗಿದೆ ಎಂದು ಶಾಸಕರು ಅಭಿಪ್ರಾಯಪಟ್ಟರು.
Kshetra Samachara
01/04/2026 05:52 pm
LOADING...