ಚಿತ್ರದುರ್ಗ: ದೇಶದ ಭವಿಷ್ಯದ ಯೋಜನೆಗಳಿಗೆ ಅಡಿಪಾಯ ಹಾಕುವ ಮಹತ್ವದ ಜನಗಣತಿ ಪ್ರಕ್ರಿಯೆಗೆ ಚಿತ್ರದುರ್ಗ ಜಿಲ್ಲೆಯಲ್ಲಿ ಬುಧವಾರ ಚಾಲನೆ ದೊರೆಯಿತು. ಜಿಲ್ಲಾ ನ್ಯಾಯಾಧೀಶರಾದ ರೋಣ ವಾಸುದೇವ್ ಹಾಗೂ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ನಗರದ ವಿ.ಪಿ. ಬಡಾವಣೆಯಲ್ಲಿರುವ ಜಿಲ್ಲಾ ನ್ಯಾಯಾಧೀಶರು ಮತ್ತು ಜಿಲ್ಲಾಧಿಕಾರಿಗಳ ನಿವಾಸದಲ್ಲಿ 2027ರ ಜನಗಣತಿಯ ಮೊದಲ ಹಂತದ ಮನೆಪಟ್ಟಿ ಕಾರ್ಯಕ್ರಮ ಹಾಗೂ ಸ್ವಯಂ ಗಣತಿ ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ರೋಣ ವಾಸುದೇವ್, ಭಾರತ ಜನಗಣತಿ ಕಾರ್ಯಕ್ರಮ ರಾಷ್ಟ್ರದ ಅಭಿವೃದ್ಧಿಯ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದೆ ಎಂದು ಒತ್ತಿ ಹೇಳಿದರು.
ಏಪ್ರಿಲ್ 01 ರಿಂದ 15 ರವರೆಗೆ ಸಾರ್ವಜನಿಕರು ತಮ್ಮ ಕುಟುಂಬದ ವಿವರಗಳನ್ನು ಆನ್‌ಲೈನ್ ಮೂಲಕ ಸ್ವಯಂ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ಎಲ್ಲ ನಾಗರಿಕರು ಈ ಸ್ವಯಂ ಗಣತಿ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ತಮ್ಮ ಮನೆ ಬಾಗಿಲಿಗೆ ಬರುವ ಗಣತಿ ಅಧಿಕಾರಿಗಳೊಂದಿಗೆ ಸೌಜನ್ಯದಿಂದ ವರ್ತಿಸಿ, ನಿಖರವಾದ ಮಾಹಿತಿ ನೀಡುವ ಮೂಲಕ ಈ ರಾಷ್ಟ್ರೀಯ ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು.
Kshetra Samachara
01/04/2026 06:42 pm
LOADING...