ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: 150ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳು ಮುಚ್ಚುವ ಭೀತಿ: ಎಐಡಿಎಸ್‍ಓ ಮತ್ತು ಶಿಕ್ಷಣ ಉಳಿಸಿ ಸಮಿತಿಯಿಂದ ಪ್ರತಿಭಟನೆ

ಚಿಕ್ಕಮಗಳೂರು: ಸರ್ಕಾರಿ ಶಾಲೆಗಳ ಅಳಿವು-ಉಳಿವಿನ ಪ್ರಶ್ನೆ ಎದುರಾಗಿದ್ದು, ಸರ್ಕಾರದ ಕೆಪಿಎಸ್ ಮ್ಯಾಗ್ನೆಟ್ ಯೋಜನೆ ವಿರುದ್ಧ ಜನತೆ ಕೆರಳಿದ್ದಾರೆ. ಚಿಕ್ಕಮಗಳೂರಿನ 150ಕ್ಕೂ ಹೆಚ್ಚು ಶಾಲೆಗಳನ್ನು ಮುಚ್ಚುವ ಹುನ್ನಾರವನ್ನು ಖಂಡಿಸಿ ಎಐಡಿಎಸ್‍ಓ (AIDSO) ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ಆಜಾದ್ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಸಿದವು. ಈ ಸಮಾವೇಶದಲ್ಲಿ ಭಾಗವಹಿಸಿದ್ದ ನೂರಾರು ಪೋಷಕರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ​ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಎಐಡಿಎಸ್‍ಓ ರಾಜ್ಯಾಧ್ಯಕ್ಷೆ ಅಶ್ವಿನಿ ಕೆ.ಎಸ್. ಸರ್ಕಾರವು ಬಡ ಮಕ್ಕಳ ಶಿಕ್ಷಣವನ್ನು ಕಸಿದುಕೊಳ್ಳಲು ಸಂಚು ರೂಪಿಸಿದೆ ಎಂದು ಟೀಕಿಸಿದರು.

ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್‌ನಿಂದ 2,500 ಕೋಟಿ ರೂಪಾಯಿ ಸಾಲ ಪಡೆದು ಸರ್ಕಾರಿ ಶಾಲೆಗಳನ್ನು ಹೊರಗುತ್ತಿಗೆ ನೀಡಲು ಹೊರಟಿರುವುದು ಆಘಾತಕಾರಿ ಸಂಗತಿ. ಈ ಯೋಜನೆ ಶಿಕ್ಷಣ ಹಕ್ಕು ಕಾಯ್ದೆಯನ್ನು ನೇರವಾಗಿ ಉಲ್ಲಂಘಿಸುತ್ತದೆ ಎಂದು ಅವರು ಆಕ್ಷೇಪಿಸಿದರು. ರಾಜ್ಯದಲ್ಲಿ 62 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇವೆ ಹಾಗೂ 23 ಸಾವಿರಕ್ಕೂ ಹೆಚ್ಚು ಶಾಲಾ ಕಟ್ಟಡಗಳು ಶಿಥಿಲಗೊಂಡಿವೆ. ಈ ಮೂಲಭೂತ ಸಮಸ್ಯೆಗಳನ್ನು ಸರಿಪಡಿಸುವ ಬದಲು ಶಾಲೆಗಳ ವಿಲೀನದ ಹೆಸರಿನಲ್ಲಿ ಅವುಗಳನ್ನು ಶಾಶ್ವತವಾಗಿ ಮುಚ್ಚಲಾಗುತ್ತಿದೆ ಎಂದು ಹರಿಹಾಯ್ದರು.

Edited By : PublicNext Desk
Kshetra Samachara

Kshetra Samachara

01/04/2026 07:56 pm

Cinque Terre

2.58 K

Cinque Terre

0

ಸಂಬಂಧಿತ ಸುದ್ದಿ