ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಉಚಿತ 'ವಿದ್ಯಾರ್ಥಿ ಪ್ರಸಾದ ನಿಲಯ'ಕ್ಕೆ ಅರ್ಜಿ ಆಹ್ವಾನ

ಬೆಳಗಾವಿ: ನಾಗನೂರು ಶ್ರೀ ರುದ್ರಾಕ್ಷಿ ಮಠದ ಶ್ರೀ ಕುಮಾರೇಶ್ವರ ಉಚಿತ ವಿದ್ಯಾರ್ಥಿ ಪ್ರಸಾದ ನಿಲಯದಲ್ಲಿ

ಪ್ರವೇಶ ಪಡೆಯಲು ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರಿಗೆ ಅರ್ಜಿ ಆಹ್ವಾನಿಸಲಾಗಿದೆ.

ಬೆಳಗಾವಿಯ ಶಿವಬಸವ ನಗರದಲ್ಲಿರುವ ಶ್ರೀ ನಾಗನೂರು ರುದ್ರಾಕ್ಷಿ ಮಠದ ಆವರಣದಲ್ಲಿ ಇರುವ ಶ್ರೀ ಕುಮಾರೇಶ್ವರ ಉಚಿತ ವಿದ್ಯಾರ್ಥಿ ಪ್ರಸಾದ ನಿಲಯದಲ್ಲಿ

ಪ್ರವೇಶ ಪಡೆಯಲು 2026-27ನೇ ಸಾಲಿನ ಅರ್ಜಿ ಆಹ್ವಾನಿಸಲಾಗಿದೆ.

ಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿ ಓದುತ್ತಿರುವ 7ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಗುವುದು. ಬಹು ಆಯ್ಕೆ ಮಾದರಿ ಪ್ರಶ್ನೆ ಪತ್ರಿಕೆ ಹಾಗೂ ವಿವರಣಾತ್ಮಕ ಪರೀಕ್ಷೆ ನಡೆಸಲಾಗುತ್ತದೆ.

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಆಧಾರ್ ಕಾರ್ಡ್ ಜೊತೆಗೆ ಇತ್ತೀಚಿನ 2 ಪೋಟೊ ತರಬೇಕು. ಇಲ್ಲಿ ನೀಡಲಾದ QR Code ಸ್ಕ್ಯಾನ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 4. ಪರೀಕ್ಷೆ ನಡೆಯುವ ದಿನಾಂಕ ಏಪ್ರಿಲ್ 5.

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ:

ವ್ಯವಸ್ಥಾಪಕರು ನಾಗನೂರು ಶ್ರೀ ರುದ್ರಾಕ್ಷಿ ಮಠ, ದೂರವಾಣಿ ಸಂಖ್ಯೆ: 9036391511, 9844947387, 9632567706 ಗೆ ಕರೆ ಮಾಡಬಹುದು.

Edited By : Shivu K
PublicNext

PublicNext

01/04/2026 10:28 pm

Cinque Terre

13.69 K

Cinque Terre

0

ಸಂಬಂಧಿತ ಸುದ್ದಿ