ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿ ಸಮೀಪದ ಕಾಟಕೇರಿಯಲ್ಲಿ 70 ವರ್ಷದ ವೃದ್ಧರೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕಾಟಕೇರಿ ನಿವಾಸಿ ಅಪ್ಪಯ್ಯ ಎಂಬುವವರು ತಮ್ಮದೇ ಬಂದೂಕಿನಿಂದ ಹೊಟ್ಟೆಗೆ ಗುಂಡು ಹಾರಿಸಿಕೊಂಡಿದ್ದಾರೆ.
ತಕ್ಷಣ ಅವರನ್ನು ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಂದೆ-ಮಗನ ನಡುವಿನ ಕಲಹವೇ ಈ ಕೃತ್ಯಕ್ಕೆ ಕಾರಣ ಎಂದು ಶಂಕಿಸಲಾಗಿದೆ. ಈ ಸಂಬಂಧ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆಯ ಬಳಿಕವಷ್ಟೇ ಘಟನೆಯ ಸತ್ಯಾಸತ್ಯತೆ ಹೊರಬೀಳಲಿದೆ.
Kshetra Samachara
02/04/2026 06:59 am
LOADING...