ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ : ಕಬ್ಬಿನ ಬೆಳೆ ನಾಶ, ಘಟನಾ ಸ್ಥಳಕ್ಕೆ ಶಾಸಕ ಆರಗ ಜ್ಞಾನೇಂದ್ರ ಭೇಟಿ

ಶಿವಮೊಗ್ಗ : ಹೊಸನಗರ ತಾಲೂಕಿನ ಕಲ್ಲೂರು ಗ್ರಾಮದಲ್ಲಿನ ಕಬ್ಬಿನ ಗದ್ದೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಪ್ರದೇಶಕ್ಕೆ ಶಾಸಕ ಆರಗ ಜ್ಞಾನೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿ ಸ್ಥಳದಿಂದಲೇ ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳಿಗೆ, ತಹಸೀಲ್ದಾರ್‌ರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ತುರ್ತು ಪರಿಹಾರ ನೀಡುವಂತೆ ಒತ್ತಾಯಿಸಿದರು.

ಬೆಂಕಿಯಿಂದಾಗಿ ಬೀಜದ ಕಬ್ಬು ನಾಶವಾಗಿರುವುದು ರೈತನಿಗೆ ಹೆಚ್ಚಿನ ನಷ್ಟವಾಗಿದೆ ಎಂದ ಅವರು, ಕೂಡಲೇ ಸರ್ಕಾರ ರೈತನಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ರೈತ ಷಣ್ಮುಖಪ್ಪ ಕುಟುಂಬಕ್ಕೆ ಶಾಸಕ ಆರಗ ಜ್ಞಾನೇಂದ್ರ ಸಾಂತ್ವನ ಹೇಳಿ, ವೈಯಕ್ತಿಕ ಧನ ಸಹಾಯ ನೀಡಿ ಸರ್ಕಾರದಿಂದ ಹೆಚ್ಚಿನ ಪರಿಹಾರ ಕೊಡಿಸುವ ಭರವಸೆ ನೀಡಿದರು.

Edited By : PublicNext Desk
Kshetra Samachara

Kshetra Samachara

02/04/2026 09:52 am

Cinque Terre

320

Cinque Terre

0

ಸಂಬಂಧಿತ ಸುದ್ದಿ