ಶಿವಮೊಗ್ಗ : ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯ ವಿರುದ್ಧ ಹಮ್ಮಿಕೊಳ್ಳಲಾಗುವ ಮುಂದಿನ ಹೋರಾಟದ ರೂಪುರೇಷೆಗಳನ್ನು ಇನ್ನೊಂದೆರಡು ದಿನಗಳಲ್ಲಿ ನಿರ್ಧರಿಸಲಾಗುವುದು ಎಂದು ಮಾಜಿ ಉಪಮುಖ್ಯಮಂತ್ರಿ, ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ ತಿಳಿಸಿದರು.
ಜಿಲ್ಲಾಧಿಕಾರಿ ಕಛೇರಿಯಲ್ಲಿ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯ ಸಾಧಕ-ಬಾಧಕಗಳ ಬಗ್ಗೆ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಮ್ಮುಖದಲ್ಲಿ ಚರ್ಚಿಸಲು ಕರೆದ ಸಭೆಯಲ್ಲಿ ಮಾತನಾಡಿದರು.ಜಿಲ್ಲಾಧಿಕಾರಿ, ಕೆಪಿಸಿಎಲ್ ಅಧಿಕಾರಿಗಳೊಂದಿಗೆ ಹಲವು ಸಭೆಗಳು ನಡೆದಿದ್ದರೂ ಕೆಪಿಸಿಎಲ್ ಅಧಿಕಾರಿಗಳಿಂದ ಸೂಕ್ತ ಸ್ಪಂದನೆ ದೊರೆಯದ ಕಾರಣ “ಪರಿಸರಕ್ಕಾಗಿ ನಾವು" ಮತ್ತು “ರಾಷ್ಟ್ರಭಕ್ತರ ಬಳಗ"ದ ವತಿಯಿಂದ ತಮ್ಮ ನೇತೃತ್ವದಲ್ಲಿ ಮತ್ತೊಮ್ಮೆ ಜಿಲ್ಲಾಧಿಕಾರಿಗಳನ್ನು ನಿಯೋಗದೊಂದಿಗೆ ಭೇಟಿಮಾಡಿ ಚರ್ಚಿಸಲಾಯಿತು.
ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಕಟ್ಟಿ ಅವರು, ಕೆಪಿಸಿಎಲ್ ಎಂ.ಡಿ. ಕಛೇರಿಯ ಅಧಿಕಾರಿ ಉಮಾಪತಿ ಎಂಬುವವರೊಂದಿಗೆ ದೂರವಾಣಿಯಲ್ಲಿ ಸಂಪರ್ಕಿಸಿ ಪಂಪ್ಡ್ ಸ್ಟೋರೇಜ್ ಯೋಜನೆಯ ಸಮಗ್ರ ಮಾಹಿತಿ ಒದಗಿಸಲು ಕೇಳಲಾಗಿತ್ತು. ಆದರೆ ಇಂದಿನವರೆಗೂ ಆ ಮಾಹಿತಿಯನ್ನು ಪೂರೈಸದೇ ಇರುವ ಕಾರಣಗಳನ್ನು ಕೇಳಿದಾಗ ಯೋಜನೆಯ ಯಾವುದೇ ಮಾಹಿತಿಯನ್ನು ಹೊರಹಾಕ ಕೂಡದ ಎಂಬ ಆದೇಶ ಮೇಲಾಧಿಕಾರಿಗಳಿಂದ ಇರುವುದರಿಂದ ಮಾಹಿತಿ ಕೊಡಲು ಸಾಧ್ಯವಿಲ್ಲ ಎಂದು ಆ ಅಧಿಕಾರಿ ತಿಳಿಸಿದರು.
Kshetra Samachara
02/04/2026 10:01 am
LOADING...