ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯಕ್ಕೆ ಪ್ರಭಾರ ಕುಲಸಚಿವ

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯಕ್ಕೆ ಪ್ರಭಾರ ಕುಲಸಚಿವಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವ ಎ.ಎಲ್. ಮಂಜುನಾಥ್ ವರ್ಗಾವಣೆಯಾಗಿದೆ. ಇದರ ಬೆನ್ನಲ್ಲೇ ತೆರವಾದ ಸ್ಥಾನದ ಪ್ರಭಾರ ಜವಾಬ್ದಾರಿಯನ್ನು ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಒ ಎನ್.ಹೇಮಂತ್ ಅವರಿಗೆ ವಹಿಸಲಾಗಿದೆ.

ಕೆಎಎಸ್ ಅಧಿಕಾರಿಯಾಗಿದ್ದ ಎ.ಎಲ್. ಮಂಜುನಾಥ್ ಅವರನ್ನು ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಧೀನ ಕಾರ್ಯದರ್ಶಿ ಮಂಗಳವಾರ ಆದೇಶಿಸಿದ್ದರು. ಅವರು ತಮ್ಮ ಸ್ಥಾನದಿಂದ ಬಿಡುಗಡೆಯಾಗಿದ್ದು, ಆ ಜಾಗಕ್ಕೆ ಹೇಮಂತ್ ಅವರನ್ನು ನಿಯೋಜಿಸಿ ಸರ್ಕಾರ ಆದೇಶಿಸಿದೆ.

Edited By : Abhishek Kamoji
Kshetra Samachara

Kshetra Samachara

02/04/2026 10:16 am

Cinque Terre

440

Cinque Terre

0

ಸಂಬಂಧಿತ ಸುದ್ದಿ