ಬೆಳಗಾವಿ: ಬೆಳಗಾವಿ ನಗರದಲ್ಲಿ ಸುರಿದ ಭಾರಿ ಮಳೆ ಅವಾಂತರ ಸೃಷ್ಟಿಸಿದ್ದು, ರಸ್ತೆಗಳ ಮೇಲೆ ಮೂರ್ನಾಲ್ಕು ಅಡಿ ನೀರು ತುಂಬಿಕೊಂಡು ವಾಹನ ಸವಾರರು ಪರದಾಡಿದ್ದಾರೆ.
ಒಂದು ಗಂಟೆಗಳ ಕಾಲ ಕುಂದಾನಗರಿಯಲ್ಲಿ ಆಲಿಕಲ್ಲು ಸಹಿತ ಸುರಿದ ಅಕಾಲಿಕ ಭಾರಿ ಮಳೆಗೆ ಮಹಾನಗರದ ಪ್ರಮುಖ ರಸ್ತೆಗಳು ನದಿಯಂತಾಗಿದೆ. ಮೊಣಕಾಲುದ್ದು ನೀರಲ್ಲಿ ಸಾಗಲು ಪ್ರಯಾಣಿಕರ ಪರದಾಡಿದ್ದಾರೆ.
ಉದ್ಯಮಭಾಗ ಕೈಗಾರಿಕಾ ಪ್ರದೇಶದಲ್ಲಿ ದಿಢೀರ್ ಸುರಿದ ಮಳೆಯಿಂದ ಅವಾಂತರ ನಿರ್ಮಾಣವಾಗಿದೆ. ಚರಂಡಿ ನೀರು ರಸ್ತೆ ಮೇಲೆ ಬಂದು ಸಂಚಾರದಲ್ಲಿ ಅಸ್ತವ್ಯಸ್ತ ಉಂಟಾಗಿದೆ. ಆದರೆ ಸುಡು ಬಿಸಿಲಿನಲ್ಲಿ ಕಂಗೆಟ್ಟಿದ್ದ ನಗರವಾಸಿಗಳಿಗೆ ಮಳೆರಾಯ ತಂಪೆರೆದಿದ್ದಾನೆ. ಆದರೆ ರಸ್ತೆ ಮೇಲೆ ಅಡಚಣೆ ಉಂಟಾದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳ ವಿರುದ್ಧ ಬೆಳಗಾವಿ ಜನ ಆಕ್ರೋಶ ಹೊರಹಾಕಿದ್ದಾರೆ.
PublicNext
02/04/2026 10:31 am
LOADING...