ಹಾವೇರಿ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ, ಲಾರಿಯ ಮುಂಭಾಗದಲ್ಲಿ ಚಾಲಕ ಸಿಲುಕಿ ತೀವ್ರವಾಗಿ ಪರದಾಡಿದ್ದಾರೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಮತ್ತು ಆಂಬ್ಯುಲೆನ್ಸ್ ಸಿಬ್ಬಂದಿ, ತಕ್ಷಣವೇ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಲಾರಿಯ ಮುಂಭಾಗದ ಕಬ್ಬಿಣದ ಭಾಗಗಳನ್ನು ಕತ್ತರಿಸಿ, ಅದರೊಳಗೆ ಸಿಲುಕಿದ್ದ ಚಾಲಕನನ್ನು ಹೊರತೆಗೆದರು.
ಅಗ್ನಿಶಾಮಕ ದಳ ಮತ್ತು ಆಂಬ್ಯುಲೆನ್ಸ್ ಸಿಬ್ಬಂದಿಯ ಸಮಯಪ್ರಜ್ಞೆ ಹಾಗೂ ಕಾರ್ಯಕ್ಷಮತೆಯಿಂದ ಚಾಲಕನನ್ನು ಸುರಕ್ಷಿತವಾಗಿ ರಕ್ಷಿಸಲಾಯಿತು. ಸಿಬ್ಬಂದಿಯ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
ತಮಿಳುನಾಡು ಮೂಲದ 28 ವರ್ಷದ ಕುಮಾರೇಶ್ ಅಪಘಾತದಲ್ಲಿ ಸಿಲುಕಿದ್ದ ಚಾಲಕ. ಇವರು ಮುಂಬೈನಿಂದ ತಮಿಳುನಾಡಿಗೆ ಹೊರಟಿದ್ದ ಲಾರಿ ಚಲಾಯಿಸುತ್ತಿದ್ದರು. ಇವರ ಲಾರಿಗೆ ಅಪರಿಚಿತ ಲಾರಿಯೊಂದು ಡಿಕ್ಕಿ ಹೊಡೆದು ನಿಲ್ಲದೆ ಪರಾರಿಯಾಗಿದೆ.
ಚಾಲಕ ಕುಮಾರೇಶ್‌ಗೆ ಪ್ರಾಥಮಿಕ ಚಿಕಿತ್ಸೆ ನೀಡಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
PublicNext
02/04/2026 10:37 am
LOADING...