ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರಾಧ್ಯಾಪಕನ ಜೊತೆ ಸಂಬಂಧ ಕಲ್ಪಿಸಿ ಅಪಪ್ರಚಾರ : 'BAMS' ವಿದ್ಯಾರ್ಥಿನಿ ಆತ್ಮಹತ್ಯೆ

ಹೊಳಲ್ಕೆರೆ: ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ನಗರದ ಬಸವ ಲೇಔಟ್‌ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಅಧ್ಯಾಪಕನೊಂದಿಗೆ ಸಂಬಂಧ ಕಲ್ಪಿಸಿ ಅಪಪ್ರಚಾರ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಮನನೊಂದ 23 ವರ್ಷದ ಬಿಎಎಂಎಸ್ ವಿದ್ಯಾರ್ಥಿನಿ ನಿಖಿತಾ ನೇಣಿಗೆ ಶರಣಾಗಿದ್ದಾಳೆ.

ಆತ್ಮಹತ್ಯೆಗೆ ಕಾರಣ ಮತ್ತು ಡೆತ್ ನೋಟ್

ಅಧ್ಯಾಪಕ ಡಾ. ರಾಜು ಜೊತೆ ಸಂಬಂಧ ಕಲ್ಪಿಸಿ ನಿಖಿತಾ ಕುರಿತು ಅಪಪ್ರಚಾರ ಮಾಡಲಾಗುತ್ತಿತ್ತು. ಇದರಿಂದ ತೀವ್ರ ಮನನೊಂದ ನಿಖಿತಾ, ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಡೆತ್ ನೋಟ್‌ನಲ್ಲಿ ಅಧ್ಯಾಪಕ ಡಾ. ರಾಜು, ಆತನ ಪತ್ನಿ ನಿಶಾ ಹಾಗೂ ಕೆಲ ವಿದ್ಯಾರ್ಥಿನಿಯರ ಹೆಸರುಗಳನ್ನು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಘಟನೆ ಸಂಬಂಧ ಅಧ್ಯಾಪಕ ಡಾ. ರಾಜು, ಆತನ ಪತ್ನಿ ನಿಶಾ ಹಾಗೂ ಡೆತ್ ನೋಟ್‌ನಲ್ಲಿ ಹೆಸರಿಸಲಾದ ಕೆಲ ವಿದ್ಯಾರ್ಥಿಗಳ ವಿರುದ್ಧ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Edited By : PublicNext Desk
PublicNext

PublicNext

02/04/2026 11:26 am

Cinque Terre

9.33 K

Cinque Terre

1

ಸಂಬಂಧಿತ ಸುದ್ದಿ