ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಟಿ ಮೇಲೆ ಲೈಂಗಿಕ ದೌರ್ಜನ್ಯ ಯತ್ನ ಆರೋಪ - ಮಲಯಾಳಂ ನಿರ್ದೇಶಕ ರಂಜಿತ್ ಬಂಧನ

ಕೊಚ್ಚಿ: ಚಲನಚಿತ್ರದ ಸೆಟ್‌ನಲ್ಲಿ ನಟಿಯೋರ್ವರ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಆರೋಪದ ಮೇಲೆ, ಮಲಯಾಳಂ ನಿರ್ದೇಶಕ ರಂಜಿತ್ ಅವರನ್ನು ಪೊಲೀಸರು ಮಂಗಳವಾರ ಸಂಜೆ ಬಂಧಿಸಿದ್ದಾರೆ. ನಿರ್ದೇಶಕ ರಂಜಿತ್ ವಿರುದ್ಧ ಈ ಹಿಂದೆ ಸರಣಿ ಆರೋಪಗಳು ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಹೆಚ್ಚಿನ ಗಮನ ಸೆಳೆದಿದೆ.

ಸೋಮವಾರ ಕೊಚ್ಚಿ ನಗರ ಠಾಣೆಯಲ್ಲಿ ರಂಜಿತ್ ವಿರುದ್ಧ ನಟಿಯೊಬ್ಬರು ದೂರು ದಾಖಲಿಸಿದ್ದರು. ಶೂಟಿಂಗ್ ನಡೆಯುತ್ತಿದ್ದ ಸಂದರ್ಭದಲ್ಲಿ ರಂಜಿತ್ ತನ್ನನ್ನು ಪುಸಲಾಯಿಸಿ ಕ್ಯಾರವಾನ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ದೂರು ದಾಖಲಾದ ಬೆನ್ನಲ್ಲೇ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿದರು. ರಂಜಿತ್ ಅವರನ್ನು ಇಡುಕ್ಕಿ ಜಿಲ್ಲೆಯಿಂದ ಬಂಧಿಸಲಾಗಿದ್ದು, ಪ್ರಸ್ತುತ ಅವರನ್ನು ತೊಡುಪಳ ಜೈಲಿನಲ್ಲಿ ಇರಿಸಲಾಗಿದೆ. ಮುಂದಿನ ಕಾನೂನು ಪ್ರಕ್ರಿಯೆಗಳಿಗಾಗಿ ಅವರನ್ನು ಕೊಚ್ಚಿಗೆ ವರ್ಗಾಯಿಸುವ ನಿರೀಕ್ಷೆಯಿದೆ.

Edited By : Nagaraj Tulugeri
PublicNext

PublicNext

02/04/2026 12:52 pm

Cinque Terre

64.96 K

Cinque Terre

0