ಶಿವಮೊಗ್ಗ : ಶಿಕಾರಿಪುರ ತಾಲೂಕಿನ ಜನಮನದ ಆರಾಧ್ಯ ದೈವ ಶ್ರೀ ಹುಚ್ಚರಾಯ ಸ್ವಾಮಿ ರಥೋತ್ಸವವು ಇಂದು ಬೆಳಗ್ಗೆ ಅದ್ದೂರಿಯಾಗಿ ನೆರವೇರಿದ್ದು, ತೇರು ರಥಬೀದಿಯಲ್ಲಿ ವಿಜೃಂಭಣೆಯಿಂದ ಸಂಚರಿಸಿತು.
ಸಹಸ್ರಾರು ಸಂಖ್ಯೆಯಲ್ಲಿ ನೆರೆದಿದ್ದ ಭಕ್ತಾದಿಗಳ ಹರ್ಷೋದ್ಗಾರದ ನಡುವೆ ಸಾಗಿದ ರಥೋತ್ಸವವು ನಾಡಿನ ಸಾಂಸ್ಕೃತಿಕ ಸೊಬಗನ್ನು ಎತ್ತಿ ಹಿಡಿದಿದೆ.ಶಿಕಾರಿಪುರದಲ್ಲಿ ಜರುಗಿದ ಈ ಸಾಂಪ್ರದಾಯಿಕ ರಥೋತ್ಸವದಲ್ಲಿ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಶಿಕಾರಿಪುರ ಕ್ಷೇತ್ರದ ಶಾಸಕರು ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಕುಟುಂಬ ಸಮೇತರಾಗಿ ಪಾಲ್ಗೊಂಡು ಸ್ವಾಮಿ ದರ್ಶನ ಪಡೆದರು.
ಈ ಸಂದರ್ಭದಲ್ಲಿ ರಥಕ್ಕೆ ಭಕ್ತಿಪೂರ್ವಕ ಪೂಜೆ ಸಲ್ಲಿಸಿ, ಸಮಸ್ತ ಜನಕುಲಕ್ಕೆ ಒಳಿತಾಗಲಿ, ನಾಡಿನಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಲಿ, ಸ್ವಾಮಿಯ ಕೃಪಾಶೀರ್ವಾದ ಸದಾ ನಮ್ಮೆಲ್ಲರ ಮೇಲಿರಲಿ ಎಂದು ಪ್ರಾರ್ಥಿಸಿದರು. ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸಿ ಸ್ವಾಮಿ ದರ್ಶನ ಪಡೆದರು.
PublicNext
02/04/2026 02:30 pm
LOADING...