ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ : ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಪರ್ಯಾಯ ಕೆಲಸಕ್ಕೆ ಬಳಕೆ ! ಜನ ಖಂಡನೆ

ಹುಬ್ಬಳ್ಳಿ : ಸರ್ಕಾರಿ ಶಾಲೆಗಳಿಗೆ ವಿದ್ಯಾರ್ಥಿಗಳು ತಳ್ಳುವ ಗಾಡಿಯ ಮೂಲಕ ನೀರು ತರುವುದನ್ನು ಖಂಡಿಸಿದ ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಪಬ್ಲಿಕ್ ನೆಕ್ಸ್ಟ್ ಮಾಧ್ಯಮಕ್ಕೆ ವಿಡಿಯೋ ಕಳುಹಿಸಿ ಶಿಕ್ಷಣ ಇಲಾಖೆ ಗಮನ ಹರಿಸಲು ಒತ್ತಾಯ ಮಾಡಿದ್ದಾರೆ.

ಎಸ್‌..! ವೀಕ್ಷಕರೇ ಹುಬ್ಬಳ್ಳಿ ತಾಲೂಕು ಹೆಬಸೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾರ್ಚ್ ತಿಂಗಳಲ್ಲಿ ನಾಲ್ಕೈದು ಜನ ವಿದ್ಯಾರ್ಥಿಗಳು ತಳ್ಳುವ ಗಾಡಿಯ ಮೂಲಕ ಸರ್ಕಾರಿ ಶಾಲೆಗೆ ನೀರು ತಂದಿದ್ದಾರೆ.

ಈ ಬಗ್ಗೆ ಶಾಲೆಯ ಮುಖ್ಯೋಪಾಧ್ಯಾಯರಿಗೆ ಹಲವಾರು ಬಾರಿ ತಿಳಿಸಿದರೂ ಎಚ್ಚರವಾಗದ ಹಿನ್ನೆಲೆಯಲ್ಲಿ ಕೆ.ಆರ್.ಎಸ್‌ ಪಕ್ಷದವರು ಕೊನೆಗೆ ಪಬ್ಲಿಕ್ ನೆಕ್ಸ್ಟ್ ಮಾಧ್ಯಮಕ್ಕೆ ವಿಷಯ ತಿಳಿಸಿ ಏನಂದ್ರು ಕೇಳಿ.

ಬೈಟ್.1 ಮಂಜುನಾಥ ಹಿರೇಮಠ, ಕೆ.ಆರ್‌.ಎಸ್

ಸದ್ಯ ಶಾಲೆಯ ಎಸ್ಡಿಎಂಸಿ ಹಾಗೂ ಮುಖ್ಯೋಪಾಧ್ಯಾಯರು ಇಂತಹ ತಪ್ಪು ಮರುಕಳಿಸದಂತೆ ಎಚ್ಚರ ವಹಿಸುವ ಭರವಸೆ ನೀಡಿದ್ದಾರೆ. ಆದರೆ, ಸರ್ಕಾರಿ ಶಾಲೆಗೆ ಶಿಕ್ಷಣ ಅರಸಿ ಬರುವ ವಿದ್ಯಾರ್ಥಿಗಳು ಪರ್ಯಾಯ ಕೆಲಸ ಮಾಡುವುದು ಎಷ್ಟರ ಮಟ್ಟಿಗೆ ಸರಿ ? ಈ ಬಗ್ಗೆ ಹುಬ್ಬಳ್ಳಿ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿಗಳು ಗಮನ ಹರಿಸಬೇಕಿದೆ.

ಶ್ರೀಧರ ಪೂಜಾರ, ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

02/04/2026 03:31 pm

Cinque Terre

22.91 K

Cinque Terre

1

ಸಂಬಂಧಿತ ಸುದ್ದಿ