ಮೂಡಿಗೆರೆ: ಎಸ್‌ಎಸ್‌ಎಲ್‌ಸಿ ಸಮಾಜಶಾಸ್ತ್ರ ಪರೀಕ್ಷೆಯ ವೇಳೆ ವಿದ್ಯಾರ್ಥಿಯೊಬ್ಬ ಅನಾರೋಗ್ಯದ ನಡುವೆಯೂ ಪರೀಕ್ಷೆ ಬರೆದು ಗಮನ ಸೆಳೆದಿದ್ದಾನೆ.
ಮೂಡಿಗೆರೆ ತಾಲೂಕಿನ ಬಣಕಲ್ ಪ್ರೌಢಶಾಲೆಯಲ್ಲಿ ಪರೀಕ್ಷಾ ಕೇಂದ್ರದಲ್ಲಿ ಗಗನ್ ಎಂಬ ವಿದ್ಯಾರ್ಥಿ ಇದ್ದಕ್ಕಿದ್ದಂತೆ ಅಸ್ವಸ್ಥನಾದ ತಕ್ಷಣ ಎಚ್ಚೆತ್ತ ಶಿಕ್ಷಕರು ಆತನನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ ಬಳಿಕ ವೈದ್ಯರು ತುರ್ತು ಚಿಕಿತ್ಸೆ ನೀಡಿ ಆರೋಗ್ಯವನ್ನು ಸ್ಥಿರಗೊಳಿಸಿದರು.
ಪರೀಕ್ಷೆ ಬರೆಯುವ ವಿದ್ಯಾರ್ಥಿಯ ಅದಮ್ಯ ಉತ್ಸಾಹವನ್ನು ಗಮನಿಸಿದ ವೈದ್ಯರು ಮತ್ತು ಶಿಕ್ಷಕರು, ಚಿಕಿತ್ಸೆಯ ನಂತರ ಆತನನ್ನು ಮತ್ತೆ ಪರೀಕ್ಷಾ ಕೇಂದ್ರಕ್ಕೆ ಕರೆತಂದು ಪರೀಕ್ಷೆ ಮುಂದುವರಿಸಲು ಅನುವು ಮಾಡಿಕೊಟ್ಟರು.
ಅನಾರೋಗ್ಯದ ಸವಾಲನ್ನು ಮೆಟ್ಟಿ ನಿಂತು ಗಗನ್ ಯಶಸ್ವಿಯಾಗಿ ಪರೀಕ್ಷೆಯನ್ನು ಪೂರ್ಣಗೊಳಿಸಿದ್ದು, ಪರೀಕ್ಷೆಯ ನಂತರ ಮುನ್ನೆಚ್ಚರಿಕಾ ಕ್ರಮವಾಗಿ ಆತನನ್ನು ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ವಿದ್ಯಾರ್ಥಿಯ ಆರೋಗ್ಯ ಸುಧಾರಿಸಿದ್ದು, ಈ ಘಟನೆಯು ವಿದ್ಯಾರ್ಥಿಯ ವಿದ್ಯಾಭ್ಯಾಸದ ಮೇಲಿನ ಶ್ರದ್ಧೆ ಮತ್ತು ಶಾಲಾ ಸಿಬ್ಬಂದಿಯ ಸಮಯಪ್ರಜ್ಞೆಗೆ ಸಾಕ್ಷಿಯಾಗಿದೆ.
PublicNext
02/04/2026 03:34 pm
LOADING...