ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಪ್ಯಾರಿಸ್‌ನಲ್ಲಿ ಗುಡ್ ನ್ಯೂಸ್ ಅನೌನ್ಸ್ ಮಾಡಿದ ಹರ್ಷಿಕಾ - ಭುವನ್..!

ಬೆಂಗಳೂರು: ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ಪೊನ್ನಣ್ಣ ದಂಪತಿಯಿಂದ ಸಂತಸದ ಸುದ್ದಿ ಹೊರಬಂದಿದೆ. ಹರ್ಷಿಕಾ ಅವರು ಎರಡನೇ ಬಾರಿಗೆ ತಾಯಿ ಆಗುತ್ತಿರುವ ವಿಚಾರವನ್ನು ಸೋಶಿಯಲ್ ಮೀಡಿಯಾದ ಮೂಲಕ ಅಧಿಕೃತವಾಗಿ ಹಂಚಿಕೊಂಡಿದ್ದಾರೆ.

ಈ ಸುದ್ದಿ ಅಭಿಮಾನಿಗಳಲ್ಲಿ ಖುಷಿ ಮೂಡಿಸಿದ್ದು, ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ವಿಶೇಷವಾಗಿ, ಇವರಿಬ್ಬರು ಹಂಚಿಕೊಂಡಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಗಮನ ಸೆಳೆಯುತ್ತಿದೆ.ಪ್ಯಾರಿಸ್‌ನ ಐಫಿಲ್ ಟವರ್ ಎದುರು ತೆಗೆದ ಈ ಫೋಟೋದಲ್ಲಿ ಹರ್ಷಿಕಾ, ಭುವನ್ ಜೊತೆಗೆ ಅವರ ಮೊದಲ ಮಗಳು ಕೂಡ ಕಾಣಿಸಿಕೊಂಡಿದ್ದಾಳೆ. ಈ ಕ್ಯೂಟ್ ಫ್ಯಾಮಿಲಿ ಮೂಮೆಂಟ್ ಅಭಿಮಾನಿಗಳ ಮನಗೆದ್ದಿದೆ.

ಗಮನಿಸಬೇಕಾದ ವಿಚಾರವೆಂದರೆ, ಈ ದಂಪತಿ 2024ರ ಅಕ್ಟೋಬರ್‌ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆ ಮಗುವಿಗೆ ‘ತ್ರಿದೇವಿ’ ಎಂದು ಹೆಸರು ಇಟ್ಟಿದ್ದರು. ಈಗ ಎರಡನೇ ಮಗುವಿನ ನಿರೀಕ್ಷೆಯಲ್ಲಿ ಇರುವ ಇವರಿಗೆ ಮತ್ತಷ್ಟು ಸಂತಸ ಸೇರಿದೆ.“ಈ ಸೆಪ್ಟೆಂಬರ್‌ನಲ್ಲಿ ನಮ್ಮ ಕುಟುಂಬಕ್ಕೆ ಹೊಸ ಪುಟ್ಟ ತಾರೆ ಸೇರ್ಪಡೆಯಾಗಲಿದೆ. ನಮ್ಮ ಹೃದಯ ತುಂಬ ಸಂತೋಷವಾಗಿದೆ” ಎಂದು ಭುವನ್ ಪೊನ್ನಣ್ಣ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.ಒಟ್ಟಿನಲ್ಲಿ, ಹರ್ಷಿಕಾ–ಭುವನ್ ದಂಪತಿಯ ಈ ಸಿಹಿ ಸುದ್ದಿ ಅವರ ಅಭಿಮಾನಿಗಳಿಗೆ ಇನ್ನಷ್ಟು ಖುಷಿ ತಂದಿದೆ.

Edited By :
PublicNext

PublicNext

02/04/2026 05:11 pm

Cinque Terre

18.04 K

Cinque Terre

1