ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸನ: ಸಾರ್ವಜನಿಕರ ಮೇಲೆ ಲಾಠಿ ಪ್ರಹಾರ - ಪೊಲೀಸ್ ಅಧಿಕಾರಿಗಳಿಗೆ ಬೇಲೂರು ಶಾಸಕ ಎಚ್.ಕೆ. ಸುರೇಶ್ ತರಾಟೆ

ಬೇಲೂರು: ಹಾಸನ ಜಿಲ್ಲೆಯ ಬೇಲೂರಿನಲ್ಲಿ ಪೊಲೀಸರು ಸಾರ್ವಜನಿಕರ ಮೇಲೆ ಲಾಠಿ ರುಚಿ ತೋರಿಸುತ್ತಿದ್ದಾರೆ ಎಂಬ ದೂರು ಕೇಳಿಬಂದ ಹಿನ್ನೆಲೆಯಲ್ಲಿ, ಸ್ಥಳೀಯ ಶಾಸಕ ಎಚ್.ಕೆ. ಸುರೇಶ್ ಅವರು ಪೊಲೀಸ್ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಬೇಲೂರಿನ ರಥೋತ್ಸವದ ಸಂದರ್ಭದಲ್ಲಿ ಭಕ್ತರು ಮತ್ತು ಸಾರ್ವಜನಿಕರ ಮೇಲೆ ಪೊಲೀಸರು ದರ್ಪ ತೋರುತ್ತಿದ್ದಾರೆ ಹಾಗೂ ಅನಗತ್ಯವಾಗಿ ಲಾಠಿ ಪ್ರಹಾರ ಮಾಡುತ್ತಿದ್ದಾರೆ ಎಂಬ ದೂರುಗಳು ಕೇಳಿ ಬಂದಿದ್ದವು. ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಸುರೇಶ್ ಅವರು, ಅಲ್ಲಿನ ಪೊಲೀಸ್ ಅಧಿಕಾರಿಗಳನ್ನು ಪ್ರಶ್ನಿಸಿದರು.

"ಸಾರ್ವಜನಿಕರನ್ನು ಹಿಡಿದು ಹೊಡೆಯುವುದು ಸರಿಯಲ್ಲ. ಜನರನ್ನು ಗೌರವದಿಂದ ನಡೆಸಿಕೊಳ್ಳಿ. ಎಚ್ಚರಿಕೆಯಿಂದ ಕೆಲಸ ಮಾಡಿ. ಭಕ್ತರು ಮತ್ತು ಸ್ಥಳೀಯರೇ ಇಲ್ಲಿ ಸುಪ್ರೀಂ. ಅವರ ವಿರುದ್ಧವಾಗಿ ನಡೆದುಕೊಂಡರೆ ಪರಿಸ್ಥಿತಿ ಬೇರೆಯೇ ಆಗಿರುತ್ತದೆ. ನಿಮ್ಮ ಡಿಸಿ ಬಂದರೂ ಇಲ್ಲಿ ಆಟ ನಡೆಯುವುದಿಲ್ಲ" ಎಂದು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

Edited By :
PublicNext

PublicNext

02/04/2026 05:23 pm

Cinque Terre

7.56 K

Cinque Terre

0

ಸಂಬಂಧಿತ ಸುದ್ದಿ