ಮಡಿಕೇರಿ: ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ದಿನಾಚರಣೆಯನ್ನು ಇಂದು ಕೊಡಗು ಜಿಲ್ಲಾ ಕವಾಯತು ಮೈದಾನದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿವೃತ್ತ ಪಿಎಸ್ಐ ಶ್ರೀಮತಿ ಕೆ.ಬಿ.ಅಚ್ಚಮ್ಮರವರು ಗೌರವ ವಂದನೆ ಸ್ವೀಕರಿಸಿದರು. ನಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಆರ್.ಎನ್., ಐಪಿಎಸ್ರವರು ಸಮಾರಂಭಕ್ಕೆ ಎಲ್ಲರನ್ನೂ ಸ್ವಾಗತಿಸಿದರು. ನಂತರ ದೇಶದ ಮೂರೂ ಪಡೆಗಳ ಪ್ರಥಮ ದಂಡನಾಯಕ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪರವರ ಹೆಸರಿನಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಸಿಬ್ಬಂದಿಗೆ ಕೊಡ ಮಾಡುವ ಪ್ರತಿಷ್ಠಿತ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಟ್ರೋಫಿಯನ್ನು ಈ ಸಾಲಿನಲ್ಲಿ ಜಿಲ್ಲಾ ಗಣಕ ವಿಭಾಗದಲ್ಲಿ ಸಿಸ್ಟಮ್ ಅಡ್ಮಿನ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಜಿಲ್ಲಾ ಗುಪ್ತದಳದ ಸಿಬ್ಬಂದಿ ತಿಮ್ಮಯ್ಯ ಎನ್.ಎಸ್.ರವರಿಗೆ ಪ್ರಧಾನ ಮಾಡಲಾಯಿತು. ನಂತರ ಉತ್ತಮ ಕರ್ತವ್ಯ ನಿರ್ವಹಿಸಿದ ಪೊಲೀಸ್ ಸಿಬ್ಬಂದಿಗೆ ನೀಡಲಾಗುವ ವಿಶೇಷ ಟ್ರೋಫಿಯನ್ನು ಜಿಲ್ಲಾ ಸಶಸ್ತ್ರ ದಳದ ಸಿಬ್ಬಂದಿ ಸುಧೀರ್ ಹೆಚ್.ಎಸ್.ರವರಿಗೆ ನೀಡಿ ಸನ್ಮಾನಿಸಲಾಯಿತು.
ಸಮಾರಂಭದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪರವರ ಮಗ ಏರ್ ಮಾರ್ಷಲ್ ಕೆ.ಸಿ.ಕಾರ್ಯಪ್ಪ, ನಿವೃತ್ತ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ, ಜಿಲ್ಲಾ ಪೊಲೀಸ್ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ಮತ್ತು ಇತರರು ಭಾಗವಹಿಸಿದ್ದರು.
Kshetra Samachara
02/04/2026 08:29 pm
LOADING...