ಬೆಳಗಾವಿ: ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂದು ಪಾಲಿಕೆಯಲ್ಲಿ ನಿರ್ಣಯ ಕೈಗೊಳ್ಳುವಂತೆ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ ನಡೆಸಿದೆ.
ಇಂದು ಕರವೇ ಶಿವರಾಮೇಗೌಡ ಬಣದ ಜಿಲ್ಲಾಧ್ಯಕ್ಷ ವಾಜೀದ್ ಹಿರೇಕೊಡಿ ನೇತೃತ್ವದಲ್ಲಿ ನಡೆದ ಪ್ರತಿಭಟನೆ ನಡೆಸಲಾಗಿದ್ದು, ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂದು ನಿರ್ಣಯವನ್ನ ಬೆಳಗಾವಿ ಪಾಲಿಕೆಯಲ್ಲಿ ಸರ್ವಾನುಮತದಿಂದ ಅಂಗೀಕಾರ ಮಾಡುವಂತೆ ಒತ್ತಾಯಿಸಿ ಬೆಳಗಾವಿ ಚೆನ್ನಮ್ಮ ವೃತ್ತದಲ್ಲಿ ನಡೆ ಪ್ರತಿಭಟನೆ ನಡೆಸಲಾಗಿದೆ.
ಮಹಾರಾಷ್ಟ್ರ ಪರವಾಗಿ ನಿಲುವು ಹೊಂದಿರುವ ಮರಾಠಿ ಪತ್ರಕರ್ತರನ್ನ ಗಡಿಪಾರು ಮಾಡಬೇಕು. ರಾಜ್ಯದ ಜಾಹೀರಾತು ಪಡೆದು ಮಹಾರಾಷ್ಟ್ರ ಸರ್ಕಾರಕ್ಕೆ ಸಪೋರ್ಟ್ ಮಾಡೋ ತರುಣ ಭಾರತ ಮರಾಠಿ ಪತ್ರಿಕೆಯನ್ನ ಬೆಳಗಾವಿ ಜಿಲ್ಲೆಯಿಂದ ಹೊರಹಾಕಬೇಕು. ಯಥಾವತ್ತಾಗಿ ಮಹಾಜನ್ ವರದಿಯನ್ನು ಅನುಷ್ಠಾನ ಮಾಡಬೇಕು.
ಈ ಹಿಂದೆ ಬೆಳಗಾವಿ ಪಾಲಿಕೆಯಲ್ಲಿ ಮಹಾರಾಷ್ಟ್ರದ ಅವಿಭಾಜ್ಯ ಅಂಗ ಎಂದು ನಿರ್ಣಯ ಕೈಗೊಳ್ಳಲಾಗಿದೆ. ಇದನ್ನು ಮಹಾರಾಷ್ಟ್ರ ಸುಪ್ರೀಂ ಕೋರ್ಟ್ ನಲ್ಲಿ ಪೂರಕ ದಾಖಲೆಗಳಾಗಿ ಬಳಸಿಕೊಳ್ಳುತ್ತಿದೆ. ಬೆಳಗಾವಿ ಪಾಲಿಕೆಯಲ್ಲಿ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂದು ಅಂಗೀಕಾರ ಮಾಡಬೇಕೆಂದು ಒತ್ತಾಯಿಸಲಾಯಿತು.
PublicNext
02/04/2026 08:37 pm
LOADING...