ಮೂಡಿಗೆರೆ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಏಪ್ರಿಲ್ 3 (ಶುಕ್ರವಾರ) ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಸಂಜೆ 4.30ಕ್ಕೆ ಮೂಡಿಗೆರೆಯ ಬಿಜಿಎಸ್ ಒಕ್ಕಲಿಗರ ಸಂಘದ ಶಾಲಾ ಮೈದಾನದ ಹೆಲಿಪ್ಯಾಡ್‌ಗೆ ಆಗಮಿಸಲಿರುವ ಅವರು, ಸಂಜೆ 5 ರಿಂದ 6 ಗಂಟೆಯವರೆಗೆ ಮೂಡಿಗೆರೆ, ಚಾರ್ಮಾಡಿ ಘಾಟ್ ಹಾಗೂ ಉಜಿರೆವರೆಗಿನ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಪರಿವೀಕ್ಷಣೆ ನಡೆಸಲಿದ್ದಾರೆ. ಈ ಕಾರ್ಯಕ್ರಮದ ನಂತರ ಸಂಜೆ 6 ಗಂಟೆಗೆ ಸಚಿವರು ಧರ್ಮಸ್ಥಳಕ್ಕೆ ತೆರಳಲಿದ್ದಾರೆ ಎಂದು ಅವರ ಆಪ್ತ ಕಾರ್ಯದರ್ಶಿಗಳು ಅಧಿಕೃತ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
Kshetra Samachara
02/04/2026 09:04 pm
LOADING...