ಯಾದಗಿರಿ: ಸುರಪುರ ತಾಲೂಕಿನ ಕೆಂಭಾವಿ ಪಟ್ಟಣದಲ್ಲಿ ನಾರಾಯಣಪುರ ಎಡದಂಡೆ ಕಾಲುವೆಗೆ ಕಾಲುಜಾರಿ ಬಿದ್ದ ಮಹಿಳೆಯೊಬ್ಬರನ್ನು ಸ್ಥಳೀಯರು ಸಮಯಪ್ರಜ್ಞೆ ಮೆರೆದು ರಕ್ಷಿಸಿದ್ದಾರೆ.
ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮಹಿಳೆಯನ್ನು ನೋಡಿದ ತಕ್ಷಣ, ಸ್ಥಳೀಯರು ಏಕಾಏಕಿ ಕಾಲುವೆಗೆ ಧುಮುಕಿ, ಹಗ್ಗದ ಸಹಾಯದಿಂದ ಅವರನ್ನು ಸುರಕ್ಷಿತವಾಗಿ ಹೊರಗೆ ತಂದು ಪ್ರಾಣ ಉಳಿಸಿದ್ದಾರೆ. ಈ ಸಾಹಸಮಯ ರಕ್ಷಣಾ ಕಾರ್ಯ ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
PublicNext
02/04/2026 09:26 pm
LOADING...