ಬೆಂಗಳೂರು: ಕಟ್ಟಡದ ಖಾತೆ ಮಾಡಿಕೊಡಲು 3 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಜಿಬಿಎ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ರೆವಿನ್ಯೂ ಇನ್ಸ್ಪೆಕ್ಟರ್ ವೆಂಕಟೇಶ್ ಮತ್ತು ಟ್ಯಾಕ್ಸ್ ಇನ್ಸ್ಪೆಕ್ಟರ್ ಶ್ರೀನಿವಾಸ್ ಬಂಧಿತ ಅಧಿಕಾರಿಗಳು.
ನ್ಯಾಮತುಲ್ಲಾ ಖಾನ್ ಎಂಬುವವರು ತಮ್ಮ ಕಟ್ಟಡದ ಖಾತೆ ಮಾಡಿಕೊಡಲು ಈ ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರಿನ ಸತ್ಯಾಂಶವನ್ನು ಪರಿಶೀಲಿಸಿದ ಲೋಕಾಯುಕ್ತ ಎಸ್ಪಿ ವಂಶಿಕೃಷ್ಣ ನೇತೃತ್ವದಲ್ಲಿ ತಂಡ ರಚಿಸಿ, ಕಾರ್ಯಾಚರಣೆಗೆ ಇಳಿಯಲಾಯಿತು.
ಲಂಚದ ಹಣ ಪಡೆಯುವಾಗ ಟ್ಯಾಕ್ಸ್ ಇನ್ಸ್ಪೆಕ್ಟರ್ ಶ್ರೀನಿವಾಸ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಈ ಸಂದರ್ಭದಲ್ಲಿ, ಇನ್ನೊಬ್ಬ ಅಧಿಕಾರಿ ರೆವಿನ್ಯೂ ಇನ್ಸ್ಪೆಕ್ಟರ್ ವೆಂಕಟೇಶ್ ಕೂಡ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಇಬ್ಬರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
PublicNext
03/04/2026 07:15 am
LOADING...