ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡಿಗೆರೆ: ಕೇರಳ ಚುನಾವಣಾ ಅಖಾಡದಲ್ಲಿ ಶಾಸಕಿ ನಯನಾ ಮೋಟಮ್ಮ: ಅಭ್ಯರ್ಥಿ ಪರ ಬಿರುಸಿನ ಪ್ರಚಾರ

ಮೂಡಿಗೆರೆ: ಶಾಸಕಿ ನಯನಾ ಮೋಟಮ್ಮ ಅವರು ಕೇರಳ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಎಐಸಿಸಿ ವತಿಯಿಂದ ಕುನ್ನತುನಾಡ್ ವಿಧಾನಸಭಾ ಕ್ಷೇತ್ರದ ಚುನಾವಣಾ ವೀಕ್ಷಕಿಯಾಗಿ ನೇಮಕಗೊಂಡಿರುವ ಅವರು, ಯುಡಿಎಫ್ ಅಭ್ಯರ್ಥಿ ಸುಧೀಂದ್ರನ್ ಅವರ ಪರವಾಗಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.

ಏಪ್ರಿಲ್ 4ರಂದು ಪತ್ತಿಮೊಟ್ಟಂನಲ್ಲಿ ಆಯೋಜಿಸಲಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಬೃಹತ್ ಸಾರ್ವಜನಿಕ ಸಭೆಯ ಹಿನ್ನೆಲೆಯಲ್ಲಿ, ನಯನಾ ಮೋಟಮ್ಮ ಅವರು ಎಐಸಿಸಿ ಕಾರ್ಯದರ್ಶಿ ಪಿ.ವಿ. ಮೋಹನ್ ಅವರೊಂದಿಗೆ ಪೂರ್ವಭಾವಿ ಸಭೆ ನಡೆಸಿ ಸಿದ್ಧತೆಗಳನ್ನು ಪರಿಶೀಲಿಸಿದರು. ಕ್ಷೇತ್ರದಲ್ಲಿ ಪಕ್ಷದ ಸಂಘಟನೆಯನ್ನು ಬಲಪಡಿಸುವ ಮತ್ತು ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಸ್ಥಳೀಯ ನಾಯಕರೊಂದಿಗೆ ನಿರಂತರವಾಗಿ ಕಾರ್ಯತಂತ್ರಗಳನ್ನು ರೂಪಿಸುತ್ತಿದ್ದಾರೆ.

Edited By : PublicNext Desk
PublicNext

PublicNext

03/04/2026 08:59 am

Cinque Terre

5.78 K

Cinque Terre

0

ಸಂಬಂಧಿತ ಸುದ್ದಿ