ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಏಪ್ರಿಲ್ ತಿಂಗಳ ಪಡಿತರ ಅಕ್ಕಿ ವಿತರಣೆ: ಬಿಪಿಎಲ್ ಕಾರ್ಡ್‌ದಾರರಿಗೆ 10 ಕೆಜಿ ಅಕ್ಕಿ ನಿಗದಿ!

ಚಿಕ್ಕಮಗಳೂರು: ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಅಂತ್ಯೋದಯ ಮತ್ತು ಬಿಪಿಎಲ್ ಪಡಿತರ ಚೀಟಿದಾರರಿಗೆ 2026ರ ಏಪ್ರಿಲ್ ತಿಂಗಳ ಅಕ್ಕಿ ವಿತರಣೆಯ ವಿವರಗಳನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರು ಬಿಡುಗಡೆ ಮಾಡಿದ್ದಾರೆ.

ಈ ಪ್ರಕಟಣೆಯ ಪ್ರಕಾರ ಅಂತ್ಯೋದಯ ಕಾರ್ಡ್‌ದಾರರಿಗೆ ಎನ್‌ಎಫ್‌ಎಸ್‌ಎ ಯೋಜನೆಯಡಿ ಪ್ರತಿ ಕಾರ್ಡ್‌ಗೆ 35 ಕೆಜಿ ಅಕ್ಕಿ ಸಿಗಲಿದ್ದು, ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಸದಸ್ಯರಿರುವ ಕುಟುಂಬದ ಪ್ರತಿ ವ್ಯಕ್ತಿಗೆ ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆಜಿ ಅಕ್ಕಿ ನೀಡಲಾಗುತ್ತದೆ. ಅದೇ ರೀತಿ ಆದ್ಯತಾ ಅಥವಾ ಬಿಪಿಎಲ್ ಕಾರ್ಡ್ ಹೊಂದಿರುವ ಪ್ರತಿ ಸದಸ್ಯರಿಗೆ ಎನ್‌ಎಫ್‌ಎಸ್‌ಎ ಮತ್ತು ಅನ್ನಭಾಗ್ಯ ಯೋಜನೆಯಡಿ ತಲಾ 5 ಕೆಜಿಯಂತೆ ಒಟ್ಟು 10 ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತಿದೆ.

Edited By : PublicNext Desk
Kshetra Samachara

Kshetra Samachara

03/04/2026 09:27 am

Cinque Terre

1.08 K

Cinque Terre

0

ಸಂಬಂಧಿತ ಸುದ್ದಿ