ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ರಾಮಲ್ ಕಟ್ಟೆ ಬಳಿ ಕಾರು ಅಪಘಾತ - 9 ವಿದ್ಯಾರ್ಥಿಗಳಿಗೆ ಗಾಯ

ಮಂಗಳೂರು: ನಗರದ ಹೊರವಲಯದತುಂಬೆ ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ಬುಧವಾರ ಮಧ್ಯರಾತ್ರಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಮಂಗಳೂರು ಹೊರವಲಯದ ಕಾಲೇಜಿನ 9 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಸುಜನ್, ವಿನಯ್, ಹೇಮಂತ್, ಜೈಸನ್, ರಕ್ಷಾ, ದೀಕ್ಷಾ, ಭೂಮಿಕಾ, ಲೇಪನಾ ಮತ್ತು ಐವಿಶ್ ಗಾಯಗೊಂಡವರು. ಸಣ್ಣ ಪುಟ್ಟ ಗಾಯಗಳೊಂದಿಗೆ ಎಲ್ಲಾ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಲೇಜಿನ ವಿದ್ಯಾರ್ಥಿಗಳು ಜತೆಯಾಗಿ ಕಾರಿನಲ್ಲಿ ಬಿ.ಸಿ.ರೋಡ್ ಕಡೆಗೆ ಆಗಮಿಸುತ್ತಿದ್ದ ವೇಳೆ ಘಟನೆ ನಡೆದಿದೆ. ಚಾಲಕ ಸಹಿತ 9 ವಿದ್ಯಾರ್ಥಿಗಳಿಗೆ ಗಾಯಗಳಾಗಿತ್ತು. ಗಾಯಾಳುಗಳನ್ನು ತತ್ ಕ್ಷಣವೇ ತುಂಬೆ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿ, ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ನೀಡಲಾಗಿತ್ತು. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : PublicNext Desk
Kshetra Samachara

Kshetra Samachara

03/04/2026 10:17 am

Cinque Terre

544

Cinque Terre

0

ಸಂಬಂಧಿತ ಸುದ್ದಿ