ನವದೆಹಲಿ: ಆಮ್ ಆದ್ಮಿ ಪಕ್ಷ (ಎಎಪಿ) ಸಂಸದ ರಾಘವ್ ಚಡ್ಡಾ ಅವರನ್ನು ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಹುದ್ದೆಯಿಂದ ವಜಾಗೊಳಿಸಿದೆ. ಅವರನ್ನು ತೆಗೆದುಹಾಕುವಂತೆ ಕೋರಿ ಎಎಪಿ ರಾಜ್ಯಸಭಾ ಸಚಿವಾಲಯಕ್ಕೆ ಪತ್ರ ಬರೆದಿದೆ.
ಎಎಪಿಯ ವತಿಯಿಂದ ಅವರಿಗೆ ರಾಜ್ಯಸಭೆಯಲ್ಲಿ ಮಾತನಾಡುವ ಸಮಯವನ್ನು ನೀಡಬಾರದು ಎಂದು ಮನವಿ ಮಾಡಿದೆ. ಆದರೆ, ಈ ನಿರ್ಧಾರಕ್ಕೆ ಕಾರಣವೇನೆಂಬುದರ ಬಗ್ಗೆ ಪಕ್ಷ ಯಾವುದೇ ಮಾಹಿತಿ ನೀಡದಿರುವುದು ಕುತೂಹಲ ಮೂಡಿಸಿದೆ.
ಇನ್ನೊಂದೆಡೆ ಸದ್ಯ ರಾಘವ್ ಚಡ್ಡಾ ಈ ಕುರಿತು ಸ್ಪಷ್ಟನೆ ಕೊಟ್ಟಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿದ್ದಾರೆ. ಅಲ್ಲದೇ ತಮ್ಮ ಜನಪರ ಧ್ವನಿಯನ್ನು ಹತ್ತಿಕ್ಕುವ ಕೆಲಸವಾಗ್ತಿದೆ ಎಂದು ಆರೋಪಿಸಿದ್ದಾರೆ.
PublicNext
03/04/2026 10:58 am
LOADING...