ಮುಲ್ಕಿ:ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಅಭಿವೃದ್ಧಿಯತ್ತ ಸಾಗುತ್ತಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿಗೆ ದಾನಿಗಳು ಹಾಗೂ ಭಕ್ತರು ಕೈಜೋಡಿಸಬೇಕು ಎಂದು ಬೆಂಗಳೂರಿನ ಉದ್ಯಮಿ ಶರತ್ ಸಾಲ್ಯಾನ್ ಹೇಳಿದರು.
ಅವರು ಶ್ರೀ ಕ್ಷೇತ್ರ ಬಪ್ಪನಾಡು ದೇವಸ್ಥಾನಕ್ಕೆ ವೈಯಕ್ತಿಕ ನೆಲೆಯಲ್ಲಿ ಶೀತಲೀಕರಣ ಯಂತ್ರ, 5ಎಕ್ಸಾಸ್ಟ್ ಫ್ಯಾನ್, ಅನ್ನ ಸಂತರ್ಪಣೆಯ ಸಾಮಗ್ರಿಗಳನ್ನು ಹಸ್ತಾಂತರಿಸಿ ಮಾತನಾಡಿದರು. ಅರ್ಚಕ ಪ್ರಸಾದ್ ಭಟ್ ವಿಶೇಷ ಪ್ರಾರ್ಥನೆ ಸಲ್ಲಿಸಿದರು.ದೇವಸ್ಥಾನದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತ ಅರಸರು ಮಾತನಾಡಿ ದಾನಿಗಳ ಕೊಡುಗೆಯನ್ನು ಶ್ಲಾಘಿಸಿ ಅಭಿವೃದ್ಧಿ ಪಥದತ್ತ ಮುನ್ನಡೆಯೋಣ ಎಂದು ಹೇಳಿ ದೇವಸ್ಥಾನದ ವತಿಯಿಂದ ದಾನಿಗಳ ನೆಲೆಯಲ್ಲಿ ಅವರನ್ನು ಗೌರವಿಸಿದರು.
ಮುಂಬೈ ಉದ್ಯಮಿ ರವಿರಾಜ್, ಸಿದ್ದಾಂತ್ ಸಾಲ್ಯಾನ್ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಶ್ವೇತಾ ಪಳ್ಳಿ, ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ವಾಮನ್ ಇಡ್ಯಾ, ಬಪ್ಪನಾಡು ದೇವಸ್ಥಾನದ ಅಭಿವೃದ್ಧಿ ಸಮಿತಿಯ ಸಂಜೀವ ದೇವಾಡಿಗ, ನಾಗಸ್ವರ ವಾದಕ ನಾಗೇಶ್ ಬಪ್ಪನಾಡು, ಅಕೌಂಟೆಂಟ್ ಶಿವಶಂಕರ್ ವರ್ಮ,ವಿನೋದ್ ಸಾಲ್ಯಾನ್ ಬೆಳ್ಳಾಯರು,ಕಾರ್ತಿಕ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
03/04/2026 11:43 am
LOADING...