ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಏಪ್ರಿಲ್ 4 ಮತ್ತು 5 ರಂದು ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.
ವಿಶೇಷವಾಗಿ ಮಲೆನಾಡು ಭಾಗದ ಕೆಲವು ಕಡೆಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಂಭವವಿದ್ದು. ಕಳೆದ ಎರಡು ದಿನಗಳಿಂದ ಜಿಲ್ಲೆಯ ಕೆಲವು ಭಾಗಗಳಲ್ಲಿ ಈಗಾಗಲೇ ಅಕಾಲಿಕ ಮಳೆಯಾಗಿರುವುದರಿಂದ ವಾತಾವರಣದಲ್ಲಿ ತಂಪಾಗಿದೆ. ಪ್ರಸ್ತುತ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿದ್ದರೆ, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್‌ಗೆ ದಾಖಲಾಗುವ ಸಾಧ್ಯತೆ ಇದೆ. ಅಕಾಲಿಕ ಮಳೆಯ ಎಚ್ಚರಿಕೆ ಇರುವುದರಿಂದ ರೈತರು ಹಾಗೂ ಪ್ರವಾಸಿಗರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
PublicNext
03/04/2026 12:50 pm
LOADING...