ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಎಲ್‌ಪಿಜಿ ಬುಕಿಂಗ್ ಮಾಡುವ ಮುನ್ನ ಈ ಸುದ್ದಿ ಓದಿ, ಇಲ್ಲದಿದ್ದರೆ ಖಾಲಿಯಾದೀತು ಬ್ಯಾಂಕ್ ಖಾತೆ!

ಚಿಕ್ಕಮಗಳೂರು: ಜಿಲ್ಲಾ ಪೊಲೀಸ್ ಇಲಾಖೆಯು ಎಲ್‌ಪಿಜಿ ಗ್ಯಾಸ್ ಬುಕಿಂಗ್ ಹೆಸರಿನಲ್ಲಿ ನಡೆಯುತ್ತಿರುವ ಸೈಬರ್ ವಂಚನೆಗಳ ಬಗ್ಗೆ ಸಾರ್ವಜನಿಕರಿಗೆ ಮಹತ್ವದ ಎಚ್ಚರಿಕೆಯನ್ನು ನೀಡಿದೆ.

ಇತ್ತೀಚಿನ ದಿನಗಳಲ್ಲಿ ವಂಚಕರು ಗ್ಯಾಸ್ ಅಭಾವದ ಭೀತಿ ಹುಟ್ಟಿಸಿ ಅಥವಾ ಭರ್ಜರಿ ಡಿಸ್ಕೌಂಟ್ ಆಫರ್‌ಗಳ ಆಮಿಷ ತೋರಿಸಿ ಎಸ್‌ಎಮ್‌ಎಸ್, ವಾಟ್ಸಾಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ನಕಲಿ ಲಿಂಕ್‌ಗಳನ್ನು ಕಳುಹಿಸುತ್ತಿದ್ದಾರೆ. ಈ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡಿದ ಕೂಡಲೇ ಬಳಕೆದಾರರು ನಕಲಿ ವೆಬ್‌ಸೈಟ್‌ಗಳಿಗೆ ತಲುಪುತ್ತಾರೆ ಅಥವಾ ಮಾಲ್ವೇರ್ ಇರುವ ಎಪಿಕೆ ಫೈಲ್‌ಗಳನ್ನು ಡೌನ್‌ಲೋಡ್ ಮಾಡುವಂತೆ ಪ್ರೇರೇಪಿಸಲಾಗುತ್ತದೆ. ಇದರ ಮೂಲಕ ಸಾರ್ವಜನಿಕರ ವೈಯಕ್ತಿಕ ಮಾಹಿತಿ ಹಾಗೂ ಹಣವನ್ನು ಲೂಟಿ ಮಾಡಲಾಗುತ್ತಿದೆ. ​ಗ್ರಾಹಕರು ಗ್ಯಾಸ್ ಸಿಲಿಂಡರ್ ಬುಕಿಂಗ್ ಮಾಡುವಾಗ ಕೇವಲ ಅಧಿಕೃತ ಮೊಬೈಲ್ ಆಪ್‌ಗಳು ಅಥವಾ ಅಧಿಕೃತ ವೆಬ್‌ಸೈಟ್‌ಗಳನ್ನು ಮಾತ್ರ ಬಳಸಬೇಕು ಎಂದು ಪೊಲೀಸರು ಸೂಚಿಸಿದ್ದಾರೆ.

ಅಪರಿಚಿತ ಮೂಲಗಳಿಂದ ಬರುವ ಲಿಂಕ್‌ಗಳು, ಕ್ಯೂಆರ್ ಕೋಡ್‌ಗಳು ಅಥವಾ ಸಂಶಯಾಸ್ಪದ ಫೈಲ್‌ಗಳಿಂದ ದೂರವಿರುವುದು ಸುರಕ್ಷಿತ. ಯಾವುದೇ ಕಾರಣಕ್ಕೂ ನಿಮ್ಮ ಬ್ಯಾಂಕ್ ವಿವರಗಳು, ಓಟಿಪಿ ಅಥವಾ ಪಿನ್ ಸಂಖ್ಯೆಯನ್ನು ಯಾರೊಂದಿಗೂ ಹಂಚಿಕೊಳ್ಳಬಾರದು. ತುರ್ತಾಗಿ ಹಣ ಪಾವತಿಸುವಂತೆ ಒತ್ತಡ ಹೇರುವ ಸಂದೇಶಗಳ ಬಗ್ಗೆ ಹೆಚ್ಚಿನ ಜಾಗರೂಕತೆ ವಹಿಸಬೇಕು ಎಂದು ಈ ಮೂಲಕ ಮನವಿ ಮಾಡಲಾಗಿದೆ. ಒಂದು ವೇಳೆ ಇಂತಹ ಸೈಬರ್ ವಂಚನೆಗೆ ಒಳಗಾದಲ್ಲಿ ತಕ್ಷಣವೇ ಸಹಾಯವಾಣಿ ಸಂಖ್ಯೆ 1930ಕ್ಕೆ ಕರೆ ಮಾಡಿ ದೂರು ದಾಖಲಿಸಲು ಕೋರಲಾಗಿದೆ.

Edited By : PublicNext Desk
Kshetra Samachara

Kshetra Samachara

03/04/2026 01:25 pm

Cinque Terre

2.62 K

Cinque Terre

0

ಸಂಬಂಧಿತ ಸುದ್ದಿ