ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ : ಇಬ್ಬರು ರೌಡಿಗಳು ಜಿಲ್ಲೆಯಿಂದ ಗಡಿಪಾರು

ಉಡುಪಿ: ಜಿಲ್ಲೆಯ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ವಿಜೇತ ಹಾಗೂ ಪಡುಬಿದ್ರಿ ಪೊಲೀಸ್‌ ಠಾಣಾ ವ್ಯಾಪ್ತಿಯ ಆರೀಫ್ ಸಾಹೇಬ್ ಎಂಬುವರ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿಯವರು ಹಾಗೂ ಪೊಲೀಸ್ ಅಧೀಕ್ಷಕರು ಗಡಿಪಾರು ಆದೇಶ ಹೊರಡಿಸಿದ್ದಾರೆ.

ಈ ಪೈಕಿ ಕಾಪು ಪೊಲೀಸ್‌ ಠಾಣಾ ವ್ಯಾಪ್ತಿಯ ವಿಜೇತ ವಿರುದ್ಧ 4 ಕೊಲೆಗೆ ಪ್ರಯತ್ನ ಪ್ರಕರಣ ಮತ್ತು ಹಲ್ಲೆ ಪ್ರಕರಣಗಳು ದಾಖಲಾಗಿವೆ.

ಪಡುಬಿದ್ರಿ ಪೊಲೀಸ್‌ ಠಾಣಾ ವ್ಯಾಪ್ತಿಯ ಆರೀಫ್ ಸಾಹೇಬ್ ವಿರುದ್ಧ 5 ಕೊಲೆಗೆ ಪ್ರಯತ್ನ, ಹಲ್ಲೆ ಹಾಗೂ ಮಾದಕ ದ್ರವ್ಯ ಸೇವನೆ ಪ್ರಕರಣಗಳು ದಾಖಲಾಗಿದ್ದು, ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ರೌಡಿ ಶೀಟರ್ ತೆರೆಯಲಾಗಿದೆ.

ವಿಜೇತನನ್ನು ಉತ್ತರ ಕನ್ನಡ ಜಿಲ್ಲಾ ವ್ಯಾಪ್ತಿಯ ಕಾರವಾರ ನಗರ ಪೊಲೀಸ್‌ ಠಾಣಾ ವ್ಯಾಪ್ತಿಗೆ ಮತ್ತು ಆರೀಫ್ ಸಾಹೇಬ್ ನನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.

Edited By : Vijay Kumar
PublicNext

PublicNext

03/04/2026 04:04 pm

Cinque Terre

8.7 K

Cinque Terre

0