ಯಾದಗಿರಿ: ಬಡವರ ಹಸಿವು ನೀಗಿಸುವ ಉದ್ದೇಶದಿಂದ ಸರ್ಕಾರ ಉಚಿತವಾಗಿ ನೀಡುತ್ತಿರುವ ಪಡಿತರ ಅಕ್ಕಿಯನ್ನು ನೀಡಿದ್ರೆ ಅದನ್ನು ದಾಸ್ತಾನು ಮಾಡಿ ಅಕ್ರಮವಾಗಿ ಮಾರಾಟ ಮಾಡುತ್ತಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ನಗರದ ಕಬಾಡಿಗೇರಾದಲ್ಲಿ ನಡೆದಿದೆ.
ನಗರದ 123 ನ್ಯಾಯಬೆಲೆ ಅಂಗಡಿಯಲ್ಲಿ ಪ್ರತಿ ತಿಂಗಳು ಪಡಿತರ ವಿತರಿಸುವಾಗ ಪ್ರತಿಯೊಬ್ಬರಿಂದ 2 ಕೆಜಿ ಕಡಿತಗೊಳಿಸುವುದಲ್ಲದೆ, ಕೆಲ ಪಡಿತರ ಚೀಟಿದಾರರಿಂದ ಅಕ್ಕಿ ಖರೀದಿಸಿ ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ.
ಇಂತಹ ನ್ಯಾಯಬೆಲೆ ಅಂಗಡಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಸಿಸಿಟಿವಿ ಕ್ಯಾಮೆರಾ ಅಳವಡಿಸುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆಯ ತಾಲೂಕು ಘಟಕದ ಅಧ್ಯಕ್ಷ ಎಲ್ಲಪ್ಪ ನಾಯಕ ಕಬಾಡಿಗೇರ ತಹಸಿಲ್ದಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.ಸದ್ಯ ನ್ಯಾಯಬೆಲೆ ಅಂಗಡಿಯ ಮಾಲೀಕರು ಒಬ್ಬರು ರಾತ್ರಿ ಹೊತ್ತಿನಲ್ಲಿ ಅಂದಾಜು 30 ಕ್ವಿಂಟಲ್ ನಷ್ಟು ಧಾನ್ಯವನ್ನು ಅಕ್ರಮವಾಗಿ ಸಾಗಿಸುತ್ತಿರುವ ವಿಡಿಯೋ ವೈರಲ್ ಆಗಿದೆ.
Kshetra Samachara
03/04/2026 05:00 pm
LOADING...