ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರ್ಯಕ್ರಮದಲ್ಲಿ ಕುಸಿದು ಬಿದ್ದ ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ - ಆಸ್ಪತ್ರೆಗೆ ದಾಖಲು

ಬೆಂಗಳೂರು: ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ ಕಾರ್ಯಕ್ರಮವೊಂದರಲ್ಲಿ ಕುಸಿದು ಬಿದ್ದಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.

ವೈದ್ಯರ ಪ್ರಕಾರ, ಅವರ ಆರೋಗ್ಯ ಸ್ಥಿರವಾಗಿದೆ. ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಪಿಜಿಆರ್ ಸಿಂಧ್ಯಾ ಅವರಿಗೆ ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ಆಯೋಜಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಈ ಘಟನೆ ಸಂಭವಿಸಿದೆ.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ ಅವರಿಗೆ ವಾಂತಿಯಾದ ನಂತರ, ಮನೆಗೆ ತೆರಳಲು ವೇದಿಕೆಯಿಂದ ಇಳಿಯುತ್ತಿದ್ದಾಗ ಕುಸಿದು ಬಿದ್ದಿದ್ದಾರೆ. ಸಂತೋಷ್ ಹೆಗ್ಡೆ ಅವರನ್ನು ತಕ್ಷಣ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಅವರ ಆರೋಗ್ಯ ಸ್ಥಿರವಾಗಿದೆ ಎಂದು ಖಚಿತಪಡಿಸಿದ್ದಾರೆ.

ರಕ್ತದಲ್ಲಿನ ಸಕ್ಕರೆ ಮಟ್ಟ ಕಡಿಮೆಯಾದ ಕಾರಣ ಅವರು ಅಸ್ವಸ್ಥಗೊಂಡಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಘಟನೆ ಕುರಿತು ಮಾಹಿತಿ ನೀಡಿದ ಸ್ಪೀಕರ್ ಯು. ಟಿ. ಖಾದರ್, "ಘಟನೆ ನಡೆದಾಗ ಆಂಬ್ಯುಲೆನ್ಸ್ ಲಭ್ಯವಿರಲಿಲ್ಲ. ಹಾಗಾಗಿ ನನ್ನ ವಾಹನದಲ್ಲೇ ಸಂತೋಷ್ ಹೆಗ್ಡೆ ಅವರನ್ನು ಮಣಿಪಾಲ್ ಆಸ್ಪತ್ರೆಗೆ ಕರೆತಂದೆ. ಸದ್ಯ ಅವರು ಆರಾಮಾಗಿದ್ದಾರೆ ಮತ್ತು ಅವರ ಕುಟುಂಬಸ್ಥರು ಆಸ್ಪತ್ರೆಗೆ ಬಂದಿದ್ದಾರೆ. ಯಾವುದೇ ಆತಂಕವಿಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ.

Edited By :
PublicNext

PublicNext

03/04/2026 05:56 pm

Cinque Terre

7.24 K

Cinque Terre

0