ಹುಬ್ಬಳ್ಳಿ: ನಗರದಲ್ಲಿ ಲವ್ ಜಿಹಾದ್ ಆರೋಪ ಪ್ರಕರಣದ ಹಿನ್ನೆಲೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು ವಿದ್ಯಾನಗರ ಪೊಲೀಸ್ ಠಾಣೆ ಎದುರು ಎಸ್‌ಎಸ್‌ಕೆ ಸಮಾಜದ ಮುಖಂಡರು ಹಾಗೂ ಸ್ಥಳೀಯರು ಜಮಾಯಿಸಿ, ಆರೋಪಿ ಸಮೀರ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಸಂತ್ರಸ್ತ ಯುವತಿಯನ್ನು ಕರೆತಂದು ದೂರು ದಾಖಲಿಸಲು ಮುಖಂಡರು ಮುಂದಾಗಿದ್ದಾರೆ. ಈ ವೇಳೆ ಮಾತನಾಡಿದ ಅವರು, “ಇದು ಲವ್ ಜಿಹಾದ್ ಅಲ್ಲ, ಜಿಮ್ ಲವ್ ಜಿಹಾದ್". ಹಿಂದೂ ಯುವತಿಯರನ್ನು ಟಾರ್ಗೆಟ್ ಮಾಡಿ ಬ್ಲಾಕ್‌ಮೇಲ್ ಮಾಡಲಾಗುತ್ತಿದೆ” ಎಂದು ಗಂಭೀರ ಆರೋಪ ಮಾಡಿದ್ದಾರೆ.
ಯುವತಿಗೆ ಮದ್ಯಪಾನೀಯ ನೀಡಿ ಅತ್ಯಾಚಾರ ಎಸಗಿರುವುದಾಗಿ, ಹಾಗೂ ಅದನ್ನು ಆರೋಪಿ ಸಹೋದರಿಯರೇ ವಿಡಿಯೋ ಮಾಡಿರುವುದಾಗಿ ಅವರು ಆರೋಪಿಸಿದ್ದಾರೆ. ನಿರಂತರ ಕಿರುಕುಳದಿಂದ ಬೇಸತ್ತ ಯುವತಿ ತನ್ನ ತಾಯಿಗೆ ವಿಷಯ ತಿಳಿಸಿದ್ದಾಳೆ ಎಂದು ಹೇಳಿದರು.
“ಈ ಪ್ರಕರಣದಲ್ಲಿ ಯುವಕರು ಮುಂದೆ ಬಂದಿದ್ದಾರೆ. ಇಲ್ಲದಿದ್ದರೆ ಆರೋಪಿ ಪರಾರಿಯಾಗುತ್ತಿದ್ದ. ಪ್ರತಿ ಬಾರಿ ಪೊಲೀಸರನ್ನೇ ನಿರೀಕ್ಷಿಸಲು ಸಾಧ್ಯವಿಲ್ಲ, ಯುವಕರು ಎಚ್ಚೆತ್ತುಕೊಳ್ಳಬೇಕು. ನಾವು ಅವರ ಜೊತೆ ನಿಲ್ಲುತ್ತೇವೆ,” ಎಂದು ಎಸ್‌ಎಸ್‌ಕೆ ಮುಖಂಡರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಸಂತೋಷ್ ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
03/04/2026 07:54 pm
LOADING...