ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಕೇರಳದಲ್ಲಿ ಯುಡಿಎಫ್ ಭರ್ಜರಿ ಗೆಲುವು ಸಾಧಿಸಲಿದೆ

ಮಂಗಳೂರು: ಕೇರಳದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ರಾಜಕೀಯ ಚಟುವಟಿಕೆಗಳು ಜೋರಾಗಿವೆ. ಸಚಿವ ಜಮೀರ್ ಅಹ್ಮದ್ ಖಾನ್ ಅವರು ಮಹತ್ವದ ಹೇಳಿಕೆ ನೀಡಿದ್ದು, ಕೇರಳದಲ್ಲಿ ಯುಡಿಎಫ್ ಭರ್ಜರಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಳೆದ 10 ವರ್ಷಗಳ LDF ಆಡಳಿತದಿಂದ ಜನರು ಬೇಸತ್ತಿದ್ದು, ಯುಡಿಎಫ್ ಪರ ಭಾರೀ ಅಲೆ ಇದೆ. ವಿಶೇಷವಾಗಿ ಮಂಜೇಶ್ವರ ಕ್ಷೇತ್ರದಲ್ಲಿ ಹಾಲಿ ಶಾಸಕ ಎ.ಕೆ ಅಶ್ರಫ್ ಅವರ ಗೆಲುವಿನ ವಿಶ್ವಾಸವನ್ನು ವ್ಯಕ್ತಪಡಿಸಿದರು. ಈ ಬಾರಿ ಎ.ಕೆ ಅಶ್ರಫ್ ಭಾರೀ ಮತಗಳ ಅಂತರದಿಂದ ಗೆಲ್ಲಲಿದ್ದಾರೆ. ಕಳೆದ ಬಾರಿ ಅಲ್ಪಮತದಿಂದ ಗೆದ್ದಿದ್ದರೂ, ಈ ಬಾರಿ ಜನರಿಂದ ದೊಡ್ಡ ಬೆಂಬಲ ದೊರೆಯಲಿದೆ ಎಂದರು. ತಾವು ಕೇರಳ ರಾಜ್ಯದ ಹಲವು ಕ್ಷೇತ್ರದಲ್ಲಿ ಪ್ರಚಾರ ನಡೆಸಿದ ವೇಳೆ ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು ಕೆಲವು ದಿನಗಳಿಂದ ಪ್ರಚಾರ ನಡೆಸುತ್ತಿರುವುದಾಗಿ ತಿಳಿಸಿದರು.

ಅಲ್ಲದೆ ಎಲ್ಲೆಡೆ ಯುಡಿಎಫ್ ಅಭ್ಯರ್ಥಿಗಳಿಗೆ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಹೇಳಿದ್ದಾರೆ. ಒಟ್ಟಿನಲ್ಲಿ, ಕೇರಳದಲ್ಲಿ ಯುಡಿಎಫ್ 100ರಿಂದ 105 ಸ್ಥಾನಗಳನ್ನು ಗೆಲ್ಲಲಿದೆ ಎಂದರು.

Edited By : Vinayak Patil
PublicNext

PublicNext

03/04/2026 08:01 pm

Cinque Terre

11.5 K

Cinque Terre

0