ಉಡುಪಿ : ಕ್ರೈಸ್ತ ಸಮುದಾಯದ ಪವಿತ್ರ ದಿನವಾದ ಶುಭ ಶುಕ್ರವಾರವನ್ನು (ಗುಡ್ ಫ್ರೈಡೆ) ಉಡುಪಿ ಜಿಲ್ಲಾದ್ಯಂತ ಉಪವಾಸ, ಧ್ಯಾನ ಹಾಗೂ ಪ್ರಾರ್ಥನೆಯೊಂದಿಗೆ ಆಚರಿಸಲಾಯಿತು.
ಜಿಲ್ಲೆಯ ಎಲ್ಲಾ ಚರ್ಚುಗಳಲ್ಲೂ ಬೆಳಗ್ಗಿನಿಂದ ಪ್ರಾರ್ಥನೆ, ಧ್ಯಾನ, ಯೇಸುವಿನ ಶಿಲುಬೆಯ ಹಾದಿಯ ವಾಚನ ಜರುಗಿತು.
ಧರ್ಮಪ್ರಾಂತದ ಪ್ರಧಾನ ದೇವಾಲಯವಾದ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ನಲ್ಲಿ ಧರ್ಮಪ್ರಾಂತದ ಪ್ರೇಷಿತ ಆಡಳಿತಾಧಿಕಾರಿ ಅತಿ ವಂ. ಜೆರಾಲ್ಡ್ ಐಸಾಕ್ ಲೋಬೊ ಪ್ರಾರ್ಥನಾ ವಿಧಿಯನ್ನು ನೆರವೇರಿಸಿದರು.
ಈ ವೇಳೆ ಸಂದೇಶ ನೀಡಿದ ಬಿಷಪ್ ಜೆರಾಲ್ಡ್ ಲೋಬೊ ಅವರು ಈ ಲೋಕವನ್ನು ಉಳಿಸಲು ಶತ್ರುಗಳ ವಶವಾದ ಯೇಸುಕ್ರಿಸ್ತರು ಕ್ರೂರ ಶಿಲುಬೆಯ ಮರಣಕ್ಕೆ ಒಳಗಾದರು. ಈ ಲೋಕದಲ್ಲಿ ಪಾಪಮಾಡಿದ ಪ್ರತಿ ಮನುಷ್ಯನಿಗಾಗಿ ಅವರು ಶಿಲುಬೆಯನ್ನು ಹೊತ್ತು ಲೋಕವನ್ನು ಕಾಪಾಡಲು ಅವರು ತಮ್ಮ ಪ್ರಾಣವನ್ನೇ ಅರ್ಪಿಸಿದರು. ಯೇಸುಕ್ರಿಸ್ತರು ತನ್ನ ಗೆಳೆಯನಿಗಾಗಿ ಪ್ರಾಣಕೊಡುವ ಪ್ರೀತಿಗಿಂತ ಮಿಗಿಲಾದ ಪ್ರೀತಿ ಮತ್ತೊಂದಿಲ್ಲ ಎನ್ನುವುದನ್ನು ತನ್ನ ಕೃತಿಯ ಮೂಲಕ ತೋರಿಸಿದರು. ಕ್ರೂರ ಶಿಲುಬೆಯ ಮರಣಕ್ಕೆ ಒಳಗಾದ ಯೇಸು ಕ್ರಿಸ್ತರು ಪ್ರೀತಿ, ಕ್ಷಮೆ ಮತ್ತು ತ್ಯಾಗದ ಸಂದೇಶವನ್ನು ಜಗತ್ತಿಗೆ ಸಾರಿದರು ಎಂದರು.
Kshetra Samachara
03/04/2026 08:40 pm
LOADING...