ಮೈಸೂರು: ಭೂ ವ್ಯಾಜ್ಯ ಪ್ರಕರಣದಲ್ಲಿ ನ್ಯಾಯಾಲಯದ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಮೈಸೂರಿನ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ವಿರುದ್ಧ ಬಂಧನ ವಾರಂಟ್ ಜಾರಿಗೊಳಿಸಿರುವ ಘಟನೆ ಬೆಳಕಿಗೆ ಬಂದಿದೆ.
ಮೈಸೂರಿನ ಒಂದನೇ ಅಪರ ಸಿವಿಲ್ ಜಡ್ಜ್ ಹಾಗೂ ಜೆಎಂಎಫ್ ನ್ಯಾಯಾಲಯ ಈ ಆದೇಶ ಹೊರಡಿಸಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು ಏಪ್ರಿಲ್ 24ಕ್ಕೆ ಮುಂದೂಡಲಾಗಿದೆ.
ಕುಂಬಾರಕೊಪ್ಪಲು ನಿವಾಸಿ ಜಯರಾಮು ಅವರ ಜಮೀನು ಸಂಬಂಧ ನ್ಯಾಯಾಲಯ ನೀಡಿದ್ದ ತೀರ್ಪನ್ನು ಜಿಲ್ಲಾಡಳಿತ ಜಾರಿಗೊಳಿಸದ ಹಿನ್ನೆಲೆಯಲ್ಲಿ ಅವರು ಮತ್ತೆ ನ್ಯಾಯಾಲಯದ ಮೊರೆ ಹೋಗಿದ್ದರು.
ವಿಚಾರಣೆಯನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯ, ಆದೇಶ ಪಾಲನೆ ಆಗದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಯ ಬಂಧನಕ್ಕೆ ವಾರಂಟ್ ಜಾರಿಗೊಳಿಸಿದೆ.
PublicNext
03/04/2026 09:57 pm
LOADING...