ಹಾವೇರಿ: ರಾಜ್ಯ ಸರ್ಕಾರ ಹೊಸದಾಗಿ ಆರಂಭಿಸಿದ್ದ ಒಂಬತ್ತು ವಿಶ್ವವಿದ್ಯಾನಿಲಯಗಳಲ್ಲಿ ಒಂದಾಗಿರುವ ಹಾವೇರಿ ವಿಶ್ವವಿದ್ಯಾನಿಲಯದ ಪ್ರಥಮ ಘಟಿಕೋತ್ಸವ ಇದೇ 6 ರಂದು ನಡೆಯಲಿದೆ. ಘಟಿಕೋತ್ಸವದಲ್ಲಿ ಸುಮಾರು 8 ವಿದ್ಯಾರ್ಥಿಗಳಿಗೆ ಚಿನ್ನದ ಪದಕ 10 ವಿದ್ಯಾರ್ಥಿಗಳಿಗೆ ನಗದು ಬಹುಮಾನ ಮತ್ತು 400 ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣಪತ್ರಗಳನ್ನು ವಿತರಿಸಲಾಗುವುದು ಎಂದು ಹಾವೇರಿ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಸುರೇಶ್ ಜಂಗಮಶೆಟ್ಟಿ ತಿಳಿಸಿದ್ದಾರೆ.
2023ರಲ್ಲಿ ರಾಜ್ಯದಲ್ಲಿ ಒಂಬತ್ತು ಹೊಸ ವಿಶ್ವವಿದ್ಯಾನಿಲಯಗಳ ಸ್ಥಾಪನೆಯಾಗಿವೆ. ಅವುಗಳಲ್ಲಿ ಘಟಿಕೋತ್ಸವ ನಡೆಸುತ್ತಿರುವ ಮೊದಲ ವಿಶ್ವವಿದ್ಯಾನಿಲಯ ಹಾವೇರಿ ಎಂದು ಪ್ರಕಟಿಸಲು ನಮಗೆ ಹೆಮ್ಮೆಯಾಗುತ್ತದೆ ಎನ್ನುತ್ತಾರೆ ವಿವಿ ಕುಲಪತಿ ಜಂಗಮಶೆಟ್ಟಿ.
ಈ ಮಧ್ಯ ಅವಸರ ಅವಸರವಾಗಿ ವಿಶ್ವವಿದ್ಯಾನಿಲಯದ ಘಟಿಕೋತ್ಸವ ನಡೆಸಲಾಗುತ್ತಿದೆ ಎಂದು ವಿದ್ಯಾರ್ಥಿ ಸಂಘಟನೆಗಳು ಆರೋಪಿಸಿವೆ.
ಹಾವೇರಿ ವಿಶ್ವವಿದ್ಯಾನಿಲಯದ ಕುಲಪತಿ ವಯೋವೃತ್ತಿಯ ಅಂಚಿನಲ್ಲಿದ್ದಾರೆ. ವಯೋವೃತ್ತಿ ಆಗುವುದರೊಳಗೆ ಘಟಿಕೋತ್ಸವ ಮುಗಿಸಬೇಕು ಎನ್ನುವ ಪ್ರತಿಷ್ಠೆಗೆ ಕುಲಪತಿ ಜಂಗಮಶೆಟ್ಟಿ ಇದ್ದಾರೆ ಎಂದು ವಿದ್ಯಾರ್ಥಿ ಮುಖಂಡರು ಆರೋಪಿಸಿದ್ದಾರೆ.
Kshetra Samachara
03/04/2026 10:37 pm
LOADING...