ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್, ಭಾರತದ ವಿರುದ್ಧ ಯುದ್ಧದ ಎಚ್ಚರಿಕೆ ನೀಡುವ ಮೂಲಕ ಉಭಯ ದೇಶಗಳ ನಡುವಿನ ಬಿಸಿಯನ್ನು ಹೆಚ್ಚಿಸಿದ್ದಾರೆ. ಈ ಬಾರಿ ಕೇವಲ ಗಡಿ ಕಾಯುವುದಷ್ಟೇ ಅಲ್ಲ, ಭಾರತದ ಗಡಿಯೊಳಗೆ ನುಗ್ಗಿ ದಾಳಿ ನಡೆಸುವುದಾಗಿ ಹೇಳಿಕೆ ನೀಡಿದ್ದಾರೆ.
"ಭಾರತವು ಮತ್ತೊಮ್ಮೆ ಸಾಹಸಕ್ಕೆ ಕೈಹಾಕಿದರೆ, ಕಳೆದ ಬಾರಿಗಿಂತಲೂ ಹೆಚ್ಚಿನ ಅವಮಾನವನ್ನು ಎದುರಿಸಬೇಕಾಗುತ್ತದೆ" ಎಂದು ಆಸಿಫ್ ಗುಡುಗಿದ್ದಾರೆ. ಯುದ್ಧದ ವ್ಯಾಪ್ತಿಯ ಬಗ್ಗೆ ಮಾತನಾಡುತ್ತಾ, ಈ ಹೋರಾಟವು ಕೇವಲ 200–250 ಕಿ.ಮೀ. ವ್ಯಾಪ್ತಿಗೆ ಸೀಮಿತವಾಗಿರುವುದಿಲ್ಲ ಎಂಬ ಸ್ಪಷ್ಟ ಸಂದೇಶ ನೀಡಿದ್ದಾರೆ.
ಪಾಕಿಸ್ತಾನವು ಕೇವಲ ರಕ್ಷಣಾತ್ಮಕವಾಗಿ ಇರದೆ, ಭಾರತದ ಭೂಭಾಗವನ್ನು ಪ್ರವೇಶಿಸಿ ಅಲ್ಲಿಯೇ ಪ್ರತ್ಯುತ್ತರ ನೀಡಲಿದೆ ಎಂಬ ಬೆದರಿಕೆಯನ್ನು ಹಾಕಿದ್ದಾರೆ. ಈ ಹೇಳಿಕೆಯು ಪಾಕಿಸ್ತಾನದ ಆಕ್ರಮಣಕಾರಿ ನಿಲುವನ್ನು ಪ್ರತಿಬಿಂಬಿಸುತ್ತಿದ್ದು, ದಕ್ಷಿಣ ಏಷ್ಯಾದ ಭದ್ರತಾ ವಲಯದಲ್ಲಿ ತೀವ್ರ ಕುತೂಹಲ ಮತ್ತು ಚರ್ಚೆಗೆ ಕಾರಣವಾಗಿದೆ.
PublicNext
03/04/2026 10:56 pm
LOADING...