ಕುಶಾಲನಗರ : ಹರದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರದೂರು - ಕಾಜೂರು ಉರೂಸ್ ಗೆ ಮಸ್ಜಿದುನ್ನೂರ್ ಮಸೀದಿಯ ಧರ್ಮಗುರುಗಳಾದ ಅಬ್ದುಲ್ ಹಕೀಂ ಅನ್ವಾರಿಯವರು ಚಾಲನೆ ನೀಡಿದರು. ಕಾಜೂರು ಉರೂಸ್ ಮಕಾಂ ನಲ್ಲಿ ಧ್ವಜಾರೋಹಣ ನೆರವೇರಿಸಿದ ಅವರು, ಉರೂಸ್ ಯಶಸ್ವಿಯಾಗಿ ನಡೆಯಲು ಪ್ರಾರ್ಥಿಸಿದರು. ಸ್ವಲಾತ್ ಕಮಿಟಿ ಅಧ್ಯಕ್ಷರಾದ ಸುಲೈಮಾನ್ ಸಖಾಫಿ ಮಾತನಾಡಿ, ಉರೂಸ್ ಗೆ ಚಾಲನೆ ನೀಡಲಾಗಿದ್ದು, ಸೋಮವಾರದಂದು ಸಮಾರೋಪ ಸಮಾರಂಭ ನಡೆಯಲಿದೆ. ಎಲ್ಲರೂ ಉರೂಸ್ ನಲ್ಲಿ ಭಾಗವಹಿಸುವ ಮೂಲಕ ಉರೂಸನ್ನು ಯಶಸ್ವಿಗೊಳಿಸಬೇಕು ಎಂದರು.
Kshetra Samachara
04/04/2026 06:52 am
LOADING...