ಕಡೂರು: ಮದುವೆಗೆ ಸೂಕ್ತ ಹೆಣ್ಣು ಸಿಗದ ಕಾರಣ ಮನನೊಂದ 26 ವರ್ಷದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿ ಸಮೀಪದ ಭೈರಗೊಂಡನಹಳ್ಳಿಯಲ್ಲಿ ನಡೆದಿದೆ.
ಮೃತ ಯುವಕನನ್ನು ತುಮಕೂರು ಜಿಲ್ಲೆ ಶಿರಾ ತಾಲೂಕಿನ ಬ್ರಹ್ಮಸಂದ್ರ ಗ್ರಾಮದ ಕುಮಾರ್ ಎಂದು ಗುರುತಿಸಲಾಗಿದೆ. ಕುರಿಗಾಹಿ ವೃತ್ತಿ ಮಾಡುತ್ತಿದ್ದ ಈತನಿಗೆ ಕಳೆದ ಕೆಲವು ವರ್ಷಗಳಿಂದ ಮನೆಯವರು ಹೆಣ್ಣು ಹುಡುಕುತ್ತಿದ್ದರೂ ಯಾವುದೇ ಸಂಬಂಧ ಕೂಡಿ ಬಂದಿರಲಿಲ್ಲ. ಇದರಿಂದ ತೀವ್ರ ಹತಾಶೆಗೆ ಒಳಗಾಗಿದ್ದ ಕುಮಾರ್, ಕುಡಿದ ಮತ್ತಿನಲ್ಲಿ ತೆಂಗಿನ ಮರಕ್ಕೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ. ಸದ್ಯ ಯಗಟಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುವಕನ ಈ ಹಠಾತ್ ನಿರ್ಧಾರದಿಂದ ಬೋರಗಾನಹಳ್ಳಿ ಗ್ರಾಮದಲ್ಲಿ ವಿಷಾದದ ಛಾಯೆ ಆವರಿಸಿದೆ.
PublicNext
04/04/2026 10:36 am
LOADING...