ಶಿವಮೊಗ್ಗ : ಹೊಸನಗರ ವಿಧಾನಸಭಾ ಕ್ಷೇತ್ರ ರಚನೆಗೆ ಆಗ್ರಹಿಸಿ ಕೈಗೊಂಡಿರುವ ಹೋರಾಟಕ್ಕೆ ಬಿಜೆಪಿ ಪಕ್ಷ ಸಂಪೂರ್ಣ ಬೆಂಬಲ ಸೂಚಿಸಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು.
ಹೊಸನಗರ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭೌಗೋಳಿಕವಾಗಿ ವಿಸ್ತಾರವಾಗಿದ್ದರೂ ಈ ಹಿಂದೆ ಕ್ಷೇತ್ರ ಮರುವಿಂಗಡಣೆ ಸಂದರ್ಭದಲ್ಲಿ ಹೊಸನಗರ ಕ್ಷೇತ್ರ ಅಸ್ತಿತ್ವ ಕಳೆದುಕೊಂಡಿತ್ತು. ಅಂದು ಕುಲದೀಪ್ ಸಿಂಗ್ ಆಯೋಗದ ಎದುರು ನಮ್ಮ ಅಹವಾಲು ಸಲ್ಲಿಸಿದರೂ ಉಪಯೋಗ ಆಗಿರಲಿಲ್ಲ. ಅಂದು ನಡೆದ ಕ್ಷೇತ್ರ ಮರುವಿಂಗಡಣೆ ಅವೈಜ್ಞಾನಿಕವಾಗಿತ್ತು. ಇದಕ್ಕೆ ತಾವೂ ಸೇರಿದಂತೆ ತಾಲೂಕಿನ ಹಲವು ಮುಖಂಡರು ವಿರೋಧ ವ್ಯಕ್ತಪಡಿಸಿದ್ದರು ಎಂದರು.
Kshetra Samachara
04/04/2026 10:51 am
LOADING...