ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ವಿಜೃಂಭಣೆಯ ಶ್ರೀ ದೇವರ ಪೇಟೆ ಸವಾರಿ -ಕಟ್ಟೆ ಪೂಜೆ-ಎರಡು ದೇವರುಗಳಿಗೆ ಏಕಕಾಲದಲ್ಲಿ ಪೂಜೆ

ಮುಲ್ಕಿ: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಶುಕ್ರವಾರ ರಾತ್ರಿ ಶ್ರೀ ದೇವರ ಉತ್ಸವ ಬಲಿ, ಸಣ್ಣ ರಥೋತ್ಸವ, ಪಲ್ಲಕಿ ಉತ್ಸವ , ಶ್ರೀ ದೇವರಪೇಟೆ ಸವಾರಿ ಕ್ಷೇತ್ರದ ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿ, ಅರ್ಚಕರಾದ ನರಸಿಂಹ ಭಟ್, ಶ್ರೀಪತಿ ಉಪಾಧ್ಯಾಯ ಪೌರೋಹಿತ್ಯದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ದೇವರು ಪಂಚಮಹಲ್ ಶ್ರೀ ಸದಾಶಿವ ದೇವಸ್ಥಾನ ಹಾಗೂ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಎರಡು ದೇವರುಗಳಿಗೆ ಏಕಕಾಲದಲ್ಲಿ ಪೂಜೆ ನಡೆಯಿತು.

ಈ ಸಂದರ್ಭ ದೇವಸ್ಥಾನದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತ ಅರಸರು, ಕಾರ್ಯನಿರ್ವಹಣಾಧಿಕಾರಿ ಶ್ವೇತಾ ಪಳ್ಳಿ, ಅಭಿವೃದ್ಧಿ ಸಮಿತಿಯ ಡಾ.ಹರಿಕೃಷ್ಣ ಪುನರೂರು, ಅತುಲ್ ಕುಡ್ವ, ಸತೀಶ್ ಭಂಡಾರಿ,ಉದ್ಯಮಿ ಶರತ್ ಸಾಲ್ಯಾನ್ ಬೆಂಗಳೂರು,ಸುನಿಲ್ ಆಳ್ವ ಗೋಪಾಲಕೃಷ್ಣ ಭಟ್, ಶ್ರೀನಾಥ್ ಭಟ್,ಸತೀಶ್ ಅಂಚನ್, ಕಿರಣ್ ಶೆಟ್ಟಿ ಕೋಲ್ನಾಡು ಗುತ್ತು, ಸತೀಶ್ ಶೆಟ್ಟಿ ಪೇಟೆ ಮನೆ, ಡಾ. ಹರಿಶ್ಚಂದ್ರ ಪಿ ಸಾಲ್ಯಾನ್, ಅಶ್ವಿನ್ ಆಳ್ವ ಕುಬೆವೂರು ಚಂದ್ರಶೇಖರ್ ಸುವರ್ಣ,ನಾಗಸ್ವರ ವಾದಕ ನಾಗೇಶ್ ಬಪ್ಪನಾಡು, ಅಕೌಂಟೆಂಟ್ ಶಿವಶಂಕರ್ ವರ್ಮ, ಕಾರ್ತಿಕ್ ಕೋಟ್ಯಾನ್ ,ಮತ್ತಿತರರು ಉಪಸ್ಥಿತರಿದ್ದರು.

ಜಾತ್ರಾ ಮಹೋತ್ಸವದ ಪ್ರಯುಕ್ತ ಎ.7ರಂದುಹಗಲು ರಥೋತ್ಸವ, ರಾತ್ರಿ ಶಯನೋತ್ಸವ, ಎ.8ರಂದು ಬೆಳಿಗ್ಗೆ ಕವಾಟೋದ್ಘಾಟನೆ, ರಾತ್ರಿ ಮಹಾರಥೋತ್ಸವ ನಡೆಯಲಿದೆ.

Edited By : PublicNext Desk
Kshetra Samachara

Kshetra Samachara

04/04/2026 11:16 am

Cinque Terre

640

Cinque Terre

0

ಸಂಬಂಧಿತ ಸುದ್ದಿ