ಶಿವಮೊಗ್ಗ : ತೀರ್ಥಹಳ್ಳಿ ತಾಲೂಕಿನ ಕುಡುಮಲ್ಲಿಗೆ ಸಮೀಪದ ಹುಗುಳವಳ್ಳಿಯಲ್ಲಿ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.
ವೇಗವಾಗಿ ಬಂದ ಬೈಕ್ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಇದರ ರಭಸಕ್ಕೆ, ಬೈಕ್ ಸಂಪೂರ್ಣವಾಗಿ ಬಸ್ಸಿನ ಕೆಳಭಾಗಕ್ಕೆ ನುಗ್ಗಿದ್ದು, ಇದರಿಂದಾಗಿ ಸವಾರನಿಗೆ ಗಂಭೀರವಾಗಿ ಗಾಯಗಳಾಗಿವೆ.ಅಪಘಾತ ಸಂಭವಿಸುತ್ತಿದ್ದಂತೆಯೇ ಸ್ಥಳೀಯರು ಧಾವಿಸಿ ಗಾಯಾಳುವನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಸದ್ಯ ಈ ಘಟನೆಗೆ ಸಂಬಂಧಿಸಿದಂತೆ ಮಾಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Kshetra Samachara
04/04/2026 01:22 pm
LOADING...