ಚೆನ್ನೈ: ಏಪ್ರಿಲ್ 23 ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನಿರಾಕರಿಸಲಾಗಿದೆ ಎಂಬ ಊಹಾಪೋಹಗಳಿಗೆ ತಮಿಳುನಾಡು ಬಿಜೆಪಿ ಘಟಕದ ಮಾಜಿ ಮುಖ್ಯಸ್ಥ ಅಣ್ಣಾಮಲೈ ಕೊನೆಗೂ ತೆರೆ ಎಳೆದಿದ್ದಾರೆ.
ಚೆನ್ನೈನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಾನೇ ನಿರ್ಧರಿಸಿದ್ದೇನೆ. ಪಕ್ಷದ ಕೋರ್ ಕಮಿಟಿಗೆ ಈ ನಿರ್ಧಾರವನ್ನು ಮುಂಚಿತವಾಗಿ ತಿಳಿಸಿದ್ದೇನೆ ಮತ್ತು ಯಾವುದೇ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಲಿಖಿತವಾಗಿ ಕೊಟ್ಟಿದ್ದೇನೆ. ಇದಿಷ್ಟಕ್ಕೇ ನನಗೆ ಟಿಕೆಟ್ ನಿರಾಕರಿಸಲಾಗಿದೆ ಎಂದರ್ಥವಲ್ಲ, ಬದಲಿಗೆ ಸ್ಪರ್ಧೆ ಮಾಡದೇ ಇರಲು ನಾನೇ ನಿರ್ಧಾರ ಮಾಡಿದ್ದೇನೆ" ಎಂದು ಸ್ಪಷ್ಟಪಡಿಸಿದರು.
ಬಿಜೆಪಿ ತನ್ನ 27 ಅಭ್ಯರ್ಥಿಗಳ ಸಂಪೂರ್ಣ ಪಟ್ಟಿಯನ್ನು ಬಿಡುಗಡೆಗೊಳಿಸಿದ ನಂತರ ಅಣ್ಣಾಮಲೈ ಸ್ಪರ್ಧಿಸದಿರುವ ಕುರಿತು ಚರ್ಚೆಗಳು ಶುರುವಾಗಿದ್ದವು. ಇದಕ್ಕೆ ಸ್ಪಷ್ಟನೆ ನೀಡುವ ಅಗತ್ಯವಿರಲಿಲ್ಲ, ಆದರೆ ಮಾಧ್ಯಮಗಳಲ್ಲಿ ಈ ಕುರಿತು ಹೆಚ್ಚು ಚರ್ಚೆಯಾಗುತ್ತಿದ್ದರಿಂದ ಸತ್ಯಾಂಶವನ್ನು ಬಹಿರಂಗಪಡಿಸಲು ಬಂದಿದ್ದೇನೆ ಎಂದು ಅಣ್ಣಾಮಲೈ ತಿಳಿಸಿದರು.
ತಮ್ಮ ನಿರ್ಧಾರವನ್ನು ಗೌರವಿಸಿದ್ದಕ್ಕಾಗಿ ಮತ್ತು ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳನ್ನು ಬೆಂಬಲಿಸಿ ಪ್ರಚಾರ ನಡೆಸಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಬಿಜೆಪಿ ನಾಯಕತ್ವಕ್ಕೆ ಧನ್ಯವಾದ ಅರ್ಪಿಸಿದ್ದಾರೆ.
PublicNext
04/04/2026 02:56 pm
LOADING...