ಬೆಂಗಳೂರು: ಗೀತಂ ಯುನಿವರ್ಸಿಟಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಲ್ಯಾಪ್ ಟಾಪ್ ಕಳ್ಳತನವಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ ನಾಗದೇನಹಳ್ಳಿಯ ಬಾಡಿಗೆ ಮನೆಯಲ್ಲಿ ನಡೆದಿದೆ.
ಒಂದೇ ತಿಂಗಳಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮೂರು ಲ್ಯಾಪ್ ಟಾಪ್ ಗಳನ್ನ ವಿದ್ಯಾರ್ಥಿಗಳು ಕಳ್ಳತನ ಮಾಡಿದ್ದಾರೆ. ಲ್ಯಾಪ್‌ಟಾಪ್ ಕಳ್ಳತನ ಮಾಡಿಕೊಂಡು ಹೊರ ಹೋಗುವ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಲ್ಯಾಪ್ ಟಾಪ್ ಕಳೆದಿರುವುದರಿಂದ ವೃತ್ತಿಪರ ಪ್ರಾಜೆಕ್ಟ್ ತಯಾರಿಸಲು ಮುಂದಾಗಿದ್ದ ಆಂದ್ರಮೂಲದ ಎಂಜಿನೀಯರಿಂಗ್ ವಿದ್ಯಾರ್ಥಿಗಳಿಗೆ ಸಂಕಷ್ಟವಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
PublicNext
04/04/2026 02:57 pm
LOADING...