ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಾನವ-ಪ್ರಾಣಿ ಸಂಘರ್ಷಕ್ಕೆ ಕೊನೆ: ಬೀದಿ ನಾಯಿಗಳ ಹಸಿವು ನೀಗಿಸಿ, ಸುರಕ್ಷಿತ ಬದುಕು ಕಟ್ಟಿದ ಚಳ್ಳಕೆರೆ

ಚಳ್ಳಕೆರೆ: ಬೀದಿ ನಾಯಿಗಳ ಕಲ್ಯಾಣ ಮತ್ತು ನಿರ್ವಹಣೆ ಹಾಗೂ ಸಾರ್ವಜನಿಕ ಆರೋಗ್ಯ ರಕ್ಷಣೆ ಹಿನ್ನೆಲೆಯಲ್ಲಿ ಸ್ಟ್ರೀಟ್ ಡಾಗ್ಸ್‌ಗೆ ಆಹಾರ ನೀಡಲು ಚಳ್ಳಕೆರೆ ನಗರದಲ್ಲಿ 20 ಸ್ಥಳಗಳನ್ನು ‘ಫೀಡಿಂಗ್ ಸ್ಪಾಟ್’ಗಳ ಗುರುತಿಸಲಾಗಿದ್ದು ಈಗಾಗಲೇ 9 ಸ್ಥಳಗಳಲ್ಲಿ ಬೀದಿನಾಯಿಗಳಿಗೆ ಆಹಾರ ಇಡಲು ವ್ಯವಸ್ಥೆ ಮಾಡಲಾಗಿದೆ ಎಂದು ಪೌರಯುಕ್ತೆ ಡಾ.ನಾಗವೇಣಿ ತಿಳಿಸಿದ್ದಾರೆ

ಮಾಧ್ಯಮದೊಂದಿಗೆ ಮಾತನಾಡಿದ ಅವರು ಮಾನವ ಮತ್ತು ಸಮುದಾಯ ಪ್ರಾಣಿಗಳ ನಡುವೆ ಸಹಬಾಳ್ವೆ ವೃದ್ಧಿಸಲು ಮತ್ತು ಸಂಘರ್ಷ ಕಡಿಮೆಗೊಳಿಸಲು ಬೀದಿ/ಸಮುದಾಯ ನಾಯಿಗಳಿಗೆ ಆಹಾರ ನೀಡುವ ಕಾರ್ಯವು ಮಹತ್ತರವಾಗಿದೆ. ಈ ರೀತಿ ವ್ಯವಸ್ಥಿತವಾಗಿ ಆಹಾರ ಒದಗಿಸುವುದರಿಂದ ಶ್ವಾನಗಳ ಹಸಿವು ನೀಗಿಸುವ ಮೂಲಕ ಅವುಗಳ ಕ್ರೂರಸ್ವಭಾವ ಮತ್ತು ಕಚ್ಚುವ ಪ್ರವೃತ್ತಿಯನ್ನು ಕಡಿಮೆಗೊಳಿಸಬಹುದಾಗಿದೆ. ಜತೆಗೆ ಬೀದಿನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಹಾಗೂ ಸಾಮೂಹಿಕ ಲಸಿಕಾ ಕಾರ್ಯಕ್ರಮವನ್ನು ನಿರ್ವಹಿಸಲು ಇದು ಸಹಕಾರಿಯಾಗಿರುತ್ತದೆ ಎಂದು ತಿಳಿಸಿದ್ದಾರೆ

ಫೀಡಿಂಗ್ ಸ್ಪಾಟ್‌ಗಳನ್ನು ಗುರುತಿಸಿರುವ ಜಾಗಗಳಲ್ಲಿ ಸೂಚನಾ ಫಲಕ ಅಳವಡಿಸಿ ನಾಗರಿಕರಿಗೆ ಮಾಹಿತಿ ಒದಗಿಸಲಾಗಿದೆ .

ಯೋಜನೆ ಕೇವಲ ಪ್ರಾಣಿಗಳ ಕಲ್ಯಾಣಕ್ಕೆ ಮಾತ್ರವಲ್ಲ, ನಗರದಲ್ಲಿ ಮಾನವ-ಪ್ರಾಣಿ ಸಹಬಾಳ್ವೆಯತ್ತ ಒತ್ತು ನೀಡುತ್ತದೆ. ಬೀದಿ ನಾಯಿಗಳ ಸಮರ್ಥ ನಿರ್ವಹಣೆ ಮತ್ತು ನಿಯಂತ್ರಿತ ಬೆಳವಣಿಗೆ, ರಸ್ತೆ ಅಪಘಾತಗಳು ಮತ್ತು ಜನತೆ ನಡುವಿನ ಸಂಘರ್ಷವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಜೊತೆಗೆ, ಸಾರ್ವಜನಿಕರಲ್ಲಿ ಪ್ರಾಣಿಗಳ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಇದು ಪ್ರೇರಣೆಯಾಗಿದೆ.

ಜನವಸತಿ ಕಡಿಮೆ ಇರುವ ಪ್ರದೇಶಗಳಲ್ಲಿ ನಾಯಿಗಳು ಇರುವಂತಹ ಸ್ಥಳಗಳನ್ನು ಗುರುತಿಸಿ ಅಂತಹ ಸ್ಥಳಗಳಲ್ಲಿ ಆಹಾರಕ್ಕೆ ವ್ಯವಸ್ಥೆ ಮಾಡಲಾಗಿದ್ದು ಸಾರ್ವಜನಿಕರು ಹಾಗೂ ಪ್ರಾಣಿಪ್ರಿಯರು ಆಹಾರವನ್ನು ತಂದು ಇಲ್ಲಿ ಹಾಕುವುದರ ಮೂಲಕ ಬೀದಿ ನಾಯಿಗಳ ಬಗ್ಗೆ ಕಾಳಜಿ ವಹಿಸಬೇಕಿದೆ ಎಂದು ಅವರು ಮಾಹಿತಿ ನೀಡಿದರು.

Edited By :
PublicNext

PublicNext

04/04/2026 04:40 pm

Cinque Terre

8.42 K

Cinque Terre

0

ಸಂಬಂಧಿತ ಸುದ್ದಿ